ಮೈಸೂರು: ಕೇಂದ್ರ ಸರ್ಕಾರ ಮುಸ್ಲಿಂ ಸಮುದಾಯಗಳಿಗೆ ಮೀಸಲಾತಿ ಕೊಟ್ಟರೆ ಅದು ಸರಿ ಇರುತ್ತದೆ. ಅದೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮುಸ್ಲಿಮರಿಗೆ ಮೀಸಲಾತಿ ಕೊಟ್ಟರೆ ಅದು ತಪ್ಪಾಗುತ್ತಾ? ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.
ನಗರದಲ್ಲಿದ್ದು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ಮೋದಿ ಮೀಸಲಾತಿ ನೀಡಿದರೆ ಸರಿ ನಾವು, ಮಾಡಿದರೆ ತಪ್ಪಾಗುತ್ತದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಹೆಚ್ ಡಿ ಭೇಟಿ ಮಾಡಿದ್ಯಾಕೆ..?
ನಾವು ಧರ್ಮದ ಆಧಾರದ ಮೇಲೆ ಮೀಸಲಾತಿ ಕೊಟ್ಟಿಲ್ಲ. ಹಿಂದುಳಿದ ವರ್ಗ ಎನ್ನುವ ಕಾರಣಕ್ಕೆ ಕೊಟ್ಟಿದ್ದೇವೆ. ಅಲ್ಪ ಸಂಖ್ಯಾತರು, ಹಿಂದುಳಿದ ವರ್ಗಕ್ಕೆ ಮೀಸಲಾತಿ ಕೊಟ್ಟಾಗ ಮುಸ್ಲಿಂ ಧರ್ಮದವರಿಗೂ ಕೊಡಬೇಕಾಗುತ್ತದೆ. ಮುಸ್ಲಿಂ ಮೀಸಲಾತಿ ಕರ್ನಾಟಕ ಮಾತ್ರವಲ್ಲದೇ ಬೇರೆ ರಾಜ್ಯದಲ್ಲೂ ಇದೆ. ಆದರೆ, ನಾವು ಕೇವಲ ಮುಸ್ಲಿಂರಿಗೆ ಮಾತ್ರ ಮೀಸಲಾತಿ ಕೊಟ್ಟಿಲ್ಲ ಎಂದು ಹೇಳಿದರು.
