ಬೆಂಗಳೂರು: ಕೇಂದ್ರ ಸರ್ಕಾರ ಕಳೆದ ಕೆಲವು ತಿಂಗಳುಗಳ ಹಿಂದೆ ಕಾರ್ಮಿಕರ ಕೆಲಸದ ಅವಧಿಯನ್ನು 8 ಗಂಟೆಯಿಂದ 10 ಗಂಟೆಗೆ ವಿಸ್ತರಿಸಲು ಪ್ರಸ್ತಾವನೆ ಮಾಡಿತ್ತು. ಕೇಂದ್ರ ಸರ್ಕಾರದ ಈ ಪ್ರಸ್ತಾವನೆಗೆ ಕರ್ನಾಟಕ ರಾಜ್ಯದಲ್ಲಿ ಭಿನ್ನಮತಗಳು ವ್ಯಕ್ತವಾಗಿವೆ.
ಈಗಾಗಲೇ ಈ ಕುರಿತು ಕಾರ್ಮಿಕರ ಇಲಾಖೆಯಲ್ಲಿ ಹಲವಾರು ಸಭೆಗಳನ್ನು ನಡೆಸಿ ಮಹತ್ವದ ತೀರ್ಮಾನವನ್ನು ಪ್ರಕಟಿಸಲಾಗಿದೆ. ಯಾವುದೇ ಕಾರಣಕ್ಕೂ ಕಾರ್ಮಿಕರಿಗೆ 10:00 ಕೆಲಸ ಮಾಡಿ ಎಂದು ಒತ್ತಡ ಹಾಕಬಾರದು ಎಂದು ರಾಜ್ಯ ಸರ್ಕಾರ ಕಂಪನಿಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಇನ್ನು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಈ ಸಂಬಂಧ ಪ್ರಸ್ತಾವನೆ ಕಳುಹಿಸಿದ್ದು, ಕರ್ನಾಟಕದಲ್ಲಿ ಕಾರ್ಮಿಕ ಸಂಘಟನೆಗಳು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೆ, ಕೈಗಾರಿಕೋದ್ಯಮಗಳು ಮಾತ್ರ ಈ ಬಗ್ಗೆ ತಕ್ಕ ಪ್ರತಿಕ್ರಿಯೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಕಾರ್ಮಿಕ ಸಂಘಟನೆಗಳು, ಕೈಗಾರಿಕೋದ್ಯಮಿಗಳು ಮತ್ತು ಐಟಿ ಉದ್ಯಮಿಗಳೊಂದಿಗೆ ಹಲವಾರು ಸಲ ಸಭೆಗಳು ನಡೆದಿವೆ. ಇದನ್ನೂ ಓದಿ: ಫ್ರೀಡಮ್ ಪಾರ್ಕ್ ಆವರಣದಲ್ಲಿದ್ದ ಮರಗಳ ಹನನ..!
ಅಲ್ಲದೆ ಕಾರ್ಮಿಕರ ಹಿತದೃಷ್ಟಿಯಿಂದ ಯಾವುದೇ ಒತ್ತಡವಿಲ್ಲದೆ ಕೆಲಸದ ಅವಧಿ ವಿಸ್ತರಣೆ ವಿಚಾರದಲ್ಲಿ ಮುನ್ನಡೆಸಬೇಕೆಂದು ಇಲಾಖೆಯು ಸೂಚನೆ ನೀಡಿದ್ದು, ಕಾರ್ಮಿಕರಿಗೆ 10 ಗಂಟೆಗಳ ಕಾಲ ಕೆಲಸ ಮಾಡಲು ಒತ್ತಡ ಹಾಕದಂತೆ ಕಂಪನಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಈ ನಿರ್ಧಾರವು ರಾಜ್ಯದ ಲಕ್ಷಾಂತರ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
