ಬೆಂಗಳೂರು: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವರಾಗಿರುವಂತಹ ಜೆಪಿ ನಡ್ಡಾ ಅವರು ಇಂದು ರಾಜ್ಯದ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದು, ನಿಮ್ಹಾನ್ಸ್ ಉತ್ಸವದಲ್ಲಿ ಭಾಗಿಯಾಗಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ.
ಇಂದು ಬೆಂಗಳೂರಿಗೆ ಆಗಮರಿಸಿರುವ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಬಿಜೆಪಿಯ ನಾಯಕರು ಅದ್ದೂರಿಯಾಗಿ ಸ್ವಾಗತ ಕೋರಿದರು.
ಇನ್ನು ಬೆಂಗಳೂರು ನಗರದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ನಾಯಕರೊಂದಿಗೆ ಜೆಪಿ ನಡ್ಡಾ ಅವರು ಮಹತ್ವದ ಸಭೆಯನ್ನು ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿದ್ದು, ಈ ಸಭೆಯಲ್ಲಿ ಯಾರೆಲ್ಲಾ ಭಾಗಿಯಾಗುತ್ತಾರೆ ಎಂಬುದೇ ಕುತೂಹಲದ ಸಂಗತಿಯಾಗಿದೆ. ಇದನ್ನೂ ಓದಿ: ನಿಮ್ಹಾನ್ಸ್ ಸುವರ್ಣ ಮಹೋತ್ಸವ
ಯಾಕೆಂದರೆ ಬಿಜೆಪಿಯಲ್ಲಿ ಎರಡು ಬಣ್ಣಗಳಾಗಿದ್ದು, ಬಿಜೆಪಿಯ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ಬಸವನಗೌಡ ಪಾಟೀಲ್ ಯತ್ನಾಳ್ ಇವರಿಬ್ಬರೂ ಈ ಸಭೆಯಲ್ಲಿ ಹಾಜರಾಗುತ್ತಾರೆ ಎಂಬುದೇ ಕುತೂಹಲ ಕೆರಳಿಸಿದೆ.
ನಿನ್ನೆ ರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಪ್ರತಿಪಕ್ಷ ನಾಯಕ ಆರ್ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಯುವ ಮೋರ್ಚಾ ಅಧ್ಯಕ್ಷ ಧೀರಜ್ ಸ್ವಾಗತಿಸಿದರು.
ವಿಮಾನ ನಿಲ್ದಾಣದಿಂದ ನಡ್ಡಾ ಕೆಕೆ ಗೆಸ್ಟ್ ಹೌಸ್ನತ್ತ ಪ್ರಯಾಣ ಬೆಳೆಸಿದರು. ಇಂದು ಕುಮಾರ ಕೃಪಾ ಗೆಸ್ಟ್ ಹೌಸ್ನಲ್ಲಿ ತಂಗಲಿರುವ ಅವರು ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ.
