ದ.ಕ. ಜಿಲ್ಲೆಯಲ್ಲಿ ಕೊರೋನ ಪ್ರಕರಣ ಪತ್ತೆ

ದ.ಕ. ಜಿಲ್ಲೆಯಲ್ಲಿ ಕೊರೋನ ಪ್ರಕರಣ ಪತ್ತೆ

ಮಂಗಳೂರು, ಮೇ.13: ದ.ಕ. ಜಿಲ್ಲೆಯಲ್ಲಿ ಬುಧವಾರ ಮತ್ತೊಂದು ಕೊರೋನ ಸೋಂಕಿನ ಪಾಸಿಟಿವ್ ಪ್ರಕರಣ ದೃಢಗೊಂಡಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.ಮಂಗಳೂರು ತಾಲೂಕಿನ ಸೋಮೇಶ್ವರ ಸಮೀಪದ ದಾರಂದಬಾಗಿಲು ನಿವಾಸಿ 38 ವರ್ಷ ಪ್ರಾಯದ ಮಹಿಳೆಗೆ ಸೋಂಕು ದೃಢಗೊಂಡಿವೆ. 507ರ ಸಂಪರ್ಕದಿಂದ ಸೋಂಕು ತಗುಲಿದೆ.

ಈ ಪ್ರಕರಣಕ್ಕೂ ಪಡೀಲ್ನ ಖಾಸಗಿ ಆಸ್ಪತ್ರೆಯೇ ಮೂಲ ಎಂದು ತಿಳಿದು ಬಂದಿದೆ.
ಈವರೆಗೆ ಜಿಲ್ಲೆಯಲ್ಲಿ ದೃಢಗೊಂಡ 34 ಪಾಸಿಟಿವ್ಗಳ ಪೈಕಿ ದ.ಕ. ಜಿಲ್ಲೆಯ 26, ಕಾಸರಗೋಡಿನ 4, ಕಾರ್ಕಳದ 3 ಮತ್ತು ಭಟ್ಕಳದ 1 ಪ್ರಕರಣ ಸೇರಿವೆ. ಪಾಸಿಟಿವ್ಗಳ ಪೈಕಿ 14 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಈಗಾಗಲೆ ಬಿಡುಗಡೆಗೊಂಡಿದ್ದರೆ, 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related