ರೋಗ ಬಾಧಿತ ಪ್ರದೇಶಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ

ರೋಗ ಬಾಧಿತ ಪ್ರದೇಶಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ

ಕೊಪ್ಪಳ : ಕುಷ್ಠರೋಗ ಪ್ರಕರಣ ಕಂಡುಬಂದ ಪ್ರದೇಶಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ಕ್ರಮಕೈಗೊಳ್ಳಿ ಎಂದು ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜ.30ರಿಂದ ಫೆ.13ರವರೆಗೆ ಹಮ್ಮಿಕೊಂಡಿರುವ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ” ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಪ್ರಸ್ತುತ 63 ಕುಷ್ಠರೋಗಿಗಳಿದ್ದು, ಇವುಗಳನ್ನು ಒಳಗೊಂಡಂತೆ ಈ ಹಿಂದಿನ ರೋಗಿಗಳ ಕುರಿತು ಸಂಪೂರ್ಣ ವಿವರ ನೀಡಬೇಕು. ಎಲ್ಲಾ ತಾಲೂಕುಗಳ ಆರೋಗ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕಂಡುಬಂದ  ಕುಷ್ಠರೋಗ ಪ್ರಕರಣ ಸೇರಿ ಒಟ್ಟಾರೆ ತಾಲೂಕುವಾರು ವರದಿಯನ್ನು ಎಲ್ಲಾ ತಾಲೂಕು ಆರೋಗ್ಯಾಧಿಕಾರಿಗಳು ನೀಡಬೇಕು ಎಂದು ಟಿಎಚ್‌ಒಗಳಿಗೆ ಸೂಚನೆ ನೀಡಿದರು.

ಈ ವೇಳೆ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವೀಂದ್ರನಾಥ, ಆರ್ಸಿಎಚ್ ಅಧಿಕಾರಿ ಡಾ. ಜಂಬಯ್ಯ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಮಹೇಶ ಎಂ.ಜಿ., ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಅಧಿಕಾರಿ ಡಾ.ದೇಸಾಯಿ ಸೇರಿ ಹಲವರು ಇದ್ದರು.

Related