ಬೆಂಗಳೂರು: ಕೇಂದ್ರ ಸರ್ಕಾರ ದಿನನಿತ್ಯ ಬಳಸುವ ವಸ್ತುಗಳ ಬೆಲೆ ಏರಿಕೆ ಮಾಡಿರುವುದರ ಜೊತೆಗೆ ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್ ದರ ಹಾಗೂ ಇನ್ನಿತರ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮತ್ತೆ ಇದೀಗ ರೈಲ್ವೆ ಟಿಕೆಟ್ ದರವನ್ನು ಏರಿಕೆ ಮಾಡಿದೆ.
ಇನ್ನು ಕೇಂದ್ರ ಸರ್ಕಾರ ರೈಲ್ವೆ ಟಿಕೆಟ್ ದರವನ್ನು ಏರಿಕೆ ಮಾಡಿರುವುದನ್ನು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ.
ಕೇಂದ್ರ ಸರ್ಕಾರ ರೈಲ್ವೆ ಟಿಕೆಟ್ ದರವನ್ನು ನಿಗದಿ ಮಾಡಿರೋದು ಖಂಡನೀಯ ಈಗಾಗಲೇ ಪ್ರತಿಯೊಂದರ ಬೆಲೆಯನ್ನು ಏರಿಕೆ ಮಾಡಿದ್ದರು ಯಾರು ಏನು ಪ್ರಶ್ನೆ ಮಾಡಿದ್ದಿಲ್ಲ, ಆದರೆ ಲಕ್ಷಾನುಗಟ್ಟಲೆ ಪ್ರತಿನಿತ್ಯ ಓಡಾಡುತ್ತಿರುವ ರೈಲು ಟಿಕೆಟ್ ದರವನ್ನು ಏರಿಕೆ ಮಾಡಿದ್ದನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಪ್ರಕಟಣೆ ಹೊರಡಿಸಿದ್ದಾರೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಮತ್ತೆ ಮೊಳಗಿತು ‘ಡಿಕೆಶಿ ಮುಂದಿನ ಸಿಎಂ ಎಂಬ ಘೋಷಣೆ!
ಸಾಮಾನ್ಯ ಜನರ ಸಾರಿಗೆಯಾಗಿಯೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಬದುಕಿನ ಮೇಲೆ ಬರೆ ಎಳೆದಿದೆ. ಈ ಬೆಲೆ ಏರಿಕೆಯನ್ನು ತಕ್ಷಣ ಹಿಂತೆಗೆದುಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದರು.
ಏರುತ್ತಲೇ ಇರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರಗಳ ಭಾರದಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಹಾಲು, ಮೊಸರು, ಚಹಾ ಪುಡಿಯಿಂದ ಹಿಡಿದು ಎಲ್ಲದರ ಮೇಲೆ ಜಿಎಸ್ಟಿ ಹೇರಿಕೆಯಿಂದಾಗಿ ಪ್ರತಿಯೊಂದು ಕುಟುಂಬದ ಬಜೆಟ್ ಏರುಪೇರಾಗಿದೆ. ಇದೇ ವೇಳೆ ರೈಲು ಪ್ರಯಾಣದ ದರ ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಸರ್ಕಾರ ಜನರ ಜೇಬು ಖಾಲಿ ಮಾಡಲು ಹೊರಟಿದೆ ಎಂದು ಕಿಡಿಕಾರಿದರು.
