ಇಂದಿರಾ ಕ್ಯಾಂಟೀನ್ ಗೆ ದಿಢೀರ್ ಭೇಟಿ ನೀಡಿದ: ಡಿಸಿಎಂ

ಇಂದಿರಾ ಕ್ಯಾಂಟೀನ್ ಗೆ ದಿಢೀರ್ ಭೇಟಿ ನೀಡಿದ: ಡಿಸಿಎಂ

ಬೆಂಗಳೂರು: ನಗರದಾದ್ಯಂತ ಹಲವಾರು ಕಡೆ ಇಂದಿರಾ ಕ್ಯಾಂಟೀನ್ ಮರು ಪ್ರಾರಂಭವಾಗಿದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದಿರಾ ಕ್ಯಾಂಟೀನ್ ಅಧಿಕಾರಿಗೆ ತಿಳಿಸದೆ ಇಂದಿರಾ ಕ್ಯಾಂಟೀನ್ ಗೆ ದಿಡೀರ್ ಭೇಟಿ ನೀಡಿದ್ದಾರೆ.

ಇಂದಿರಾ ಕ್ಯಾಂಟೀನ್ ಭೇಟಿ ಮಾಡಿದ ಸಂದರ್ಭದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಇಂದಿರಾ ಕ್ಯಾಂಟೀನ್ ನಲ್ಲಿನ ಕೆಲವು ವ್ಯವಸ್ಥೆಗಳನ್ನು ಗಮನಿಸಿದ್ದೇನೆ. ಇನ್ನು ಘನತ್ಯಾಜ್ಯ ಘಟಕಗಳಲ್ಲಿ ಪರಿಶೀಲನೆ ಮಾಡಿದ್ದು, ಅಲ್ಲಿನ ಕಾರ್ಯವೈಖರಿ ತೃಪ್ತಿದಾಯಕವಾಗಿಲ್ಲ. ಮೊದಲು ಸರ್ಕಾರದ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದೇನೆ. ನಂತರ ಕಸ ವಿಲೇವಾರಿ ಸ್ಥಳಕ್ಕೆ ಭೇಟಿ ನೀಡುತ್ತೇನೆ ಎಂದು. ತಿಳಿಸಿದರು. ಈ ಎಲ್ಲಾ ಸಂಸ್ಥೆಗಳ ಕಾರ್ಯವೈಖರಿ ಸರಿಯಾದ ಹಳಿಗೆ ತರಬೇಕು. ಮೊದಲು ಆ ಕೆಲಸ ಮಾಡುತ್ತೇವೆ. ಕಸದಿಂದ ಇಂಧನ ಉತ್ಪಾದನೆ ಮಾಡುವುದಾಗಿ ಹೇಳಿ ಜವಾಬ್ದಾರಿ ವಹಿಸಿಕೊಂಡವರು ಇಂಧನ ಉತ್ಪಾದನೆ ಮಾಡುತ್ತಿಲ್ಲ. ಇನ್ನು ಈ ಘಟಕಗಳ ಕಾರ್ಯವೈಖರಿ ಬಗ್ಗೆ ಜವಾಬ್ದಾರಿಯುತ ಅಧಿಕಾರಿಗಳು ಪರಿಶೀಲನೆ ಮಾಡುತ್ತಿಲ್ಲ.

ಬೆಂಗಳೂರು ನಗರ ಸ್ವಚ್ಚವಾಗಿ ಇಡಬೇಕು. ಆದರೆ ರಸ್ತೆ ಮಧ್ಯದಲ್ಲಿ ಕಸದ ರಾಶಿ ಇರುವ ಬಗ್ಗೆ ಪರಿಶೀಲನೆ ಮಾಡಿದ್ದೇನೆ. ಈ ಬಗ್ಗೆ ಅಧಿಕಾರಿಗಳ ಪ್ರಶ್ನೆ ಮಾಡಿದ್ದೇನೆ. ಇದಕ್ಕೆ ಹೊಣೆಗಾರಿಕೆ ಯಾರು ಹೊರಬೇಕು ಎಂದು ಕೇಳಿದ್ದೇನೆ. ಈ ಮಧ್ಯೆ ಲಾರಿ ಮಾಲೀಕರ ಸಂಘದ ಜೊತೆ ಚರ್ಚೆ ಮಾಡುವಂತೆ ಆಯುಕ್ತರಿಗೆ ಸೂಚಿಸಿದ್ದೇನೆ.

ಕಸಗಳನ್ನು ತಂದು ರಸ್ತೆಗೆ ಸುರಿಯುತ್ತಿರುವ ವಾಹನಗಳ ಬಗ್ಗೆ ಗಮನಹರಿಸಬೇಕು. ತ್ಯಾಜ್ಯ ಸಂಸ್ಕರಣ ಘಟಕಗಳ ಲೆಕ್ಕಾಚಾರದಲ್ಲಿ ಏರುಪೇರುಗಳಿವೆ. ಅದೆಲ್ಲವನ್ನೂ ಸರಿಪಡಿಸುತ್ತೇವೆ. ಘಟಕಕ್ಕೆ ಬರುವ ಪ್ರತಿ ಕಸದ ವಾಹನಗಳ ವಿಡಿಯೋ ದಾಖಲೆ ಮಾಡಿಸಿದ್ದೇನೆ. ಎಲ್ಲವೂ ಲೆಕ್ಕ ಸರಿಯಾಗಿ ಹೊಂದಾಣಿಕೆಯಾಗುತ್ತದೆಯೇ ಎಂಬುದನ್ನು ನೋಡಬೇಕು.

ಇದಕ್ಕೂ ಮುನ್ನ ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿದ್ದೆ. ಒಂದು ಕಡೆ 9 ಗಂಟೆಗೆ 200ಕ್ಕೂ ಹೆಚ್ಚು ಪ್ಲೇಟ್ ತಿಂಡಿ ಖಾಲಿ ಆಗಿತ್ತು. ಅಲ್ಲಿ ₹5ರ ಬದಲು ₹10 ರೂ. ಪಡೆಯಲಾಗಿದೆ. ಅಲ್ಲಿದ್ದ ಸಹಾಯವಾಣಿ ಸಂಖ್ಯೆ ದುರಸ್ಥಿಯಲ್ಲಿತ್ತು. ಆದಷ್ಟು ಬೇಗ ಈ ಲೋಪದೋಷ ಸರಿಪಡಿಸಲಾಗುವುದು. ಎಲ್ಲಾ ಹಂತದಲ್ಲೂ ರಿಪೇರಿ ಮಾಡಲಾಗುವುದು.

ಬೆಂಗಳೂರು ಅಭಿವೃದ್ಧಿಗೆ ಬಜೆಟ್ ನಲ್ಲಿ ನಿರೀಕ್ಷೆಗೆ ತಕ್ಕ ಅನುದಾನ ಸಿಕ್ಕಿದೆಯೇ ಎಂದು ಕೇಳಿದ ಪ್ರಶ್ನೆಗೆ, “ಬಜೆಟ್ ನಲ್ಲಿ ಅನುದಾನ ಸಿಗುತ್ತದೆಯೋ ಇಲ್ಲವೋ. ನಾನು ಬೆಂಗಳೂರಿನಲ್ಲಿ ಎಲ್ಲೆಲ್ಲಿ ಸಂಪನ್ಮೂಲ ಸೋರಿಕೆಯಾಗುತ್ತಿದೆ. ತೆರಿಗೆ ವಂಚನೆ ಮಾಡಲಾಗುತ್ತಿದೆ. ಯಾವ ತೆರಿಗೆ ಹೆಚ್ಚಿಸಬೇಕು ಎಂಬುದರ ಬಗ್ಗೆ ಪರಿಶೀಲನೆ ಮಾಡುತ್ತೇವೆ” ಎಂದು ತಿಳಿಸಿದರು.

 

Related