ಸಿದ್ಧಗಂಗಾ ಮಠದ ವಿದ್ಯಾರ್ಥಿಗಳಿಗೆ ಸೋಂಕು

ಸಿದ್ಧಗಂಗಾ ಮಠದ ವಿದ್ಯಾರ್ಥಿಗಳಿಗೆ ಸೋಂಕು

ತುಮಕೂರು : ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಸಿದ್ದಗಂಗಾ ಮಠದಲ್ಲಿರುವ ವಿದ್ಯಾರ್ಥಿಗಳಿಗೂ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.

ಈ ಬಗ್ಗೆ ಮಾತನಾಡಿದ ಶ್ರೀಗಳು, ಮಠದಲ್ಲಿ ಸಧ್ಯಕ್ಕೆ 2000 ಮಕ್ಕಳಿದ್ದಾರೆ. ಎಲ್ಲರಿಗೂ ಕೋವಿಡ್ ಪರೀಕ್ಷೆ ಮಾಡಿಸಲಾಗಿದೆ.ಅವರಲ್ಲಿ 25-30 ಮಕ್ಕಳಲ್ಲಿ ಕೊರೋನಾ ಕಾಣಿಸಿಕೊಂಡಿದ್ದು ಅವರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಉಳಿದ ಮಕ್ಕಳಿಗೆ ಸೋಂಕು ತಗುಲದಂತೆ ಎಚ್ಚರಿಕೆ ವಹಿಸಿದ್ದೇವೆ.

ಮಠಕ್ಕೆ ಬರುವ ಭಕ್ತರಿಗೆ ನಿರ್ಬಂಧ ಹೇರುವುದಿಲ್ಲ, ಆದರೆ ಕೊರೋನಾ ನಿಯಮ ಪಾಲಿಸಲೇ ಬೇಕು. ಇನ್ನೂ ಕೆಲವು ಮಕ್ಕಳಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ ಎಂದು ಶ್ರೀಗಳು ತಿಳಿಸಿದ್ದಾರೆ.

Related