ಬೇಡಿಕೆಗಳ ಈಡೇರಿಕೆಗೆ ಒತ್ತಾಯ

ಬೇಡಿಕೆಗಳ ಈಡೇರಿಕೆಗೆ ಒತ್ತಾಯ

ಲಿಂಗಸುಗೂರು : ರಾಜ್ಯದ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಎಸ್‌ಎಫ್‌ಐ ಸಂಘಟನಯಿಂದ ಸಹಾಯಕ ಆಯುಕ್ತರ ಕಚೇರಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಕೊರೋನಾ ವೈರಸ್ ಪರಿಣಾಮವಾಗಿ ರಾಜ್ಯದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲಸವಿಲ್ಲದೇ ಕಂಗಲಾಗಿ ಉದ್ಯೋಗಕ್ಕಾಗಿ ಪರದಾಡುತ್ತಿದ್ದಾರೆ. ನೈಯ ಪೈಸೆ ಆದಾಯವಿಲ್ಲದೇ ಕುಟುಂಬ ನಿರ್ವಹಣೆಗಾಗಿ ಕಷ್ಟಪಡುತ್ತಿದ್ದಾರೆ. ರಾಜ್ಯ ವಿದ್ಯಾರ್ಥಿ ಸಮುದಾಯವು ಸಹ ಇದಕ್ಕೆ ಹೊರತಾಗಿಲ್ಲ. ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಶಿಕ್ಷಣದ ಬಗ್ಗೆ ಗಮನ ಹರಿಸುತ್ತಿಲ್ಲ.

ರಾಜ್ಯ ಸರ್ಕಾರ ವಿದ್ಯಾರ್ಥಿ ವಿರೋಧಿ ನೀತಿಯನ್ನು ಕೈ ಬೀಡಬೇಕು. ಪರೀಕ್ಷೆಗಳನ್ನು ರದ್ದುಪಡಿಸಬೇಕು. 6 ತಿಂಗಳ ಎಲ್ಲಾ ಶೈಕ್ಷಣಿಕ ಶುಲ್ಕಗಳನ್ನು ಮನ್ನಾ ಮಾಡಬೇಕು. ಕೋವಿಡ್-19 ಪರೀಕ್ಷೆ ಉಚಿತವಾಗಿ ಮಾಡಬೇಕು. ಪೆಟ್ರೋಲ್ ಡೀಸೆಲ್ ಬೆಲೆ ಜಿಎಸ್‌ಟಿ ಪರದಿಯೊಳಗೆ ತರಬೇಕು. ಹೊಸ ಶಿಕ್ಷಣ ನೀತಿಯನ್ನು ಹಿಂಪಡೆಯಬೇಕು. ಶಿಕ್ಷಣದ ಖಾಸಗೀಕರಣ ಹಾಗೂ ಕೇಸರಿಕರಣವನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದರು.

Related