ರೈಲ್ವೆ ಸೇತುವೆ ವಿಸ್ತರಣೆಗೆ ಒತ್ತಾಯ

ರೈಲ್ವೆ ಸೇತುವೆ ವಿಸ್ತರಣೆಗೆ ಒತ್ತಾಯ

ಕಲಬುರಗಿ : ಅಫಜಲಪುರ ತಾಲ್ಲೂಕಿನ ನೀಲೂರು ಗ್ರಾಮದ ರೈಲ್ವೆ ಸೇತುವೆ ವಿಸ್ತರಣೆಗೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಗ್ರಾಮದಲ್ಲಿ ಪೊಲೀಸರು ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಗ್ರಾಮದಲ್ಲಿ ರೈಲ್ವೆ ಹಳಿ ಜೋಡಿಮಾರ್ಗ ಕಾಮಗಾರಿ ನಡೆಯುತ್ತಿದ್ದು, ಈಗಿರುವ ರೈಲ್ವೆ ಸೇತುವೆ ವಿಸ್ತರಣೆ ಮಾಡಿ ಕಾಮಗಾರಿ ಮಾಡುವಂತೆ ಗ್ರಾಮಸ್ಥರ ಒತ್ತಾಯಿಸುತ್ತಿದ್ದಾರೆ. ಆದರೆ, ಸೇತುವೆ ವಿಸ್ತರಣೆ ಮಾಡದೇ ಕಾಮಗಾರಿ ಮಾಡಲು ರೈಲ್ವೆ ಇಲಾಖೆ ಮುಂದಾಗಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಪೊಲೀಸರು ತಡೆದರು. ಇದರಿಂದ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ, ವಾಗ್ವಾದ ಸಹ ನಡೆಯಿತು. ಇಡೀ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಇನ್ನು, ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಳಿಗ್ಗೆಯಿಂದಲೇ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಆದೇಶ ಹೊರಡಿಸಿದ್ದಾರೆ.

Related