ನಿಲ್ದಾಣಗಳಲ್ಲೂ ತಪಾಸಣೆ..

ನಿಲ್ದಾಣಗಳಲ್ಲೂ ತಪಾಸಣೆ..

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟಿçಯ ವಿಮಾನ ನಿಲ್ದಾಣ, ಮಂಗಳೂರಿನ ಬಜ್ಪೆ, ಬೆಳಗಾವಿ, ಹುಬ್ಬಳ್ಳಿ, ಕಲಬುರಗಿ, ಮೈಸೂರು ವಿಮಾನ ನಿಲ್ದಾಣಗಳಲ್ಲೂ ವಿದೇಶದಿಂದ ಬರುವ ಪ್ರಯಾಣಿಕರ ಚಲನವಲನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.

ಕಳೆದ ಎರಡು ದಿನಗಳಿಂದ ರಾಜ್ಯದ ಪ್ರತಿಯೊಂದು ವಿಮಾನ ನಿಲ್ದಾಣಗಳಲ್ಲೂ ವಿದೇಶದಿಂದ ಆಗಮಿಸುವ ಪ್ರಯಾಣಿಕರನ್ನು ತಪಾಸಣೆ ನಡೆಸಿಯೇ ಬಿಡಲಾಗುತ್ತಿದೆ. ಅದರಲ್ಲೂ ವಿಶೇಷವಾಗಿ ದುಬೈ, ಯುಎಇ, ಆಫ್ರಿಕಾ ದೇಶಗಳಿಂದ ಬರುತ್ತಿರುವ ಪ್ರಯಾಣಿಕರನ್ನು ತಪಾಸಣೆ ಮಾಡಲಾಗುತ್ತಿದೆ.

ಒಂದು ವೇಳೆ ಯಾವುದಾದರೂ ವ್ಯಕ್ತಿಗೆ ಜ್ವರ, ಕೆಮ್ಮು, ನೆಗಡಿ, ಶೀತ, ತಲೆ ಸುತ್ತು ಕಂಡುಬAದರೆ ಅವರನ್ನು ಕಡ್ಡಾಯವಾಗಿ ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ. ಕಳೆದ ಒಂದು ವಾರದಿಂದ ವಿಶ್ವ ಸಂಸ್ಥೆ ಗುರುತಿಸಿರುವ ರಾಷ್ಟ್ರಗಳಿಂದ ರಾಜ್ಯಕ್ಕೆ ಆಗಮಿಸಿರುವ ಪ್ರಯಾಣಿಕರ ಪಟ್ಟಿಯನ್ನು ಸಹ ಪಡೆಯಲಾಗಿದೆ.

ಇದರ ಜೊತೆಗೆ ಮಂಗಳೂರು, ಕಾರವಾರ, ಉಡುಪಿ, ಮಲ್ಪೆ, ಗೋಕರ್ಣ ಸೇರಿದಂತೆ ಮತ್ತಿತರ ಬಂದರುಗಳಲ್ಲೂ ಸಹ ಬಿಗಿಯಾದ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಎರಡು ದಿನಗಳ ಹಿಂದೆ ದೆಹಲಿಯಲ್ಲಿ ಪ್ರವಾಸದ ಇತಿಹಾಸ ಇಲ್ಲದ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ಪತ್ತೆಯಾಗಿತ್ತು.

 

Related