ಜಿಂದಾಲ್‌ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಜಿಂದಾಲ್‌ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಬೆಂಗಳೂರು: ಇಂದು ಜೂನ್ 21 ಅಂತರಾಷ್ಟ್ರೀಯ ಯೋಗ ದಿನಾಚರಣೆ. ನಮ್ಮ ಆರೋಗ್ಯ ಮನಸ್ಸು, ದೇಹ ಎಲ್ಲವೂ ಆರೋಗ್ಯಕರವಾಗಿರಬೇಕಾದರೆ ನಾವು ಪ್ರತಿನಿತ್ಯ ಯೋಗ ವ್ಯಾಯಾಮ ಮತ್ತಿತರ ಚಟುವಟಿಕೆಗಳನ್ನು ಮಾಡಿದರೆ ನಮ್ಮ ಆರೋಗ್ಯದಲ್ಲಿ ಏರುಪೇರು ಆಗುವುದನ್ನು ನಾವು ಕಡಿಮೆ ಮಾಡಿಕೊಳ್ಳಬಹುದು ಮತ್ತು ನಮ್ಮ ಆರೋಗ್ಯವನ್ನು ನಾವು ಸ್ಥಿರವಾಗಿ ಇಟ್ಟುಕೊಳ್ಳಬಹುದು ಆದ್ದರಿಂದ ಪ್ರತಿನಿತ್ಯ ಯೋಗ ಮಾಡುವುದನ್ನು ರೂಡಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

10ನೇ ವರ್ಷದ ಅಂತರಾಷ್ಟ್ರೀಯ ದಿನಾಚರಣೆಯ ಅಂಗವಾಗಿ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ತೋರಣಗಲ್‌ ಜಿಂದಾಲ್‌ನ ಬಸವೇಶ್ವರ ನಗರದ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾದರು.

ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ, ಸಚಿವ ಸಂತೋಷ ಲಾಡ್, ಸಂಸದ ತುಕಾರಾಂ, ನಟಿ ಶ್ರೀಲೀಲಾ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಸದ ಈ.ತುಕಾರಾಂ, ಸರ್ಕಾರದ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ವಚನಾನಂದ ಸ್ವಾಮೀಜಿ, ಶಾಸಕ ಶ್ರೀನಿವಾಸ್, KMF ಅಧ್ಯಕ್ಷ ಭೀಮಾನಾಯ್ಕ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

Related