ಮಂಡ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ಮಂಡ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ಮಂಡ್ಯ: 2024ನೇ ಸಾಲಿನ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮಂಡ್ಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಜೆಡಿಎಸ್ ನಿಂದ ಮತ್ತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಟ ನಿಖಿಲ್ ಕುಮಾರ್ ಅವರು ರಾಜಕೀಯ ಕಣಕ್ಕೆ ಇಳಿಯುತ್ತಾರ ಎಂಬ ಪ್ರಶ್ನೆಗಳು ಕಾಡುತ್ತಿವೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರ ವಿರುದ್ಧ ಸೋಲನ್ನನುಭವಿಸಿರುವ ನಿಖಿಲ್ ಕುಮಾರಸ್ವಾಮಿಯವರು ಮತ್ತೆ ವಿಧಾನಸಭಾ ಚುನಾವಣೆಯಲ್ಲೂ ಸಹ ಸೋಲನ್ನು ಅನುಭವಿಸುತ್ತಾರೆ. ಇಷ್ಟೆಲ್ಲಾ ಸೋತಿರುವ ಕುಮಾರಸ್ವಾಮಿ ಅವರ ಮಗ ನಿಖಿಲ್ ಮತ್ತೆ ಲೋಕಸಭಾ ಚುನಾವಣೆಯಲ್ಲಿ ನಿಲ್ಲುತ್ತಾರಾ ಎಂಬ ಪ್ರಶ್ನೆಗಳು ಎಲ್ಲಾ ಜೆಡಿಎಸ್ ನಾಯಕರಲ್ಲಿ ಮೂಡಿದೆ.

ಹೌದು, ಈ ಬಾರಿಯೂ ಮಂಡ್ಯ ರಾಜಕಾರಣಕ್ಕೆ ನಿಖಿಲ್ ಕುಮಾರಸ್ವಾಮಿ ಅವರನ್ನು ಕರೆತರುವ ಪ್ರಯತ್ನಗಳು ನಡೆಯುತ್ತಿವೆ. ಈಗಗಾಲೇ ಮಂಡ್ಯದಿಂದ ನಿಖಿಲ್ ಸ್ಪರ್ಧೆ ಮಾಡಲ್ಲ ಎಂದು ಹೆಚ್‌‌ಡಿಕೆ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆ ಕುಮಾರಸ್ವಾಮಿ ಅವರ ಮನವೊಲಿಸಲು ಮಂಡ್ಯ ಭಾಗದ ಜೆಡಿಎಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಕುಮಾರಸ್ವಾಮಿ ಅವರು ತಮ್ಮ ಹೇಳಿಕೆಯನ್ನು ಮರುಪರಿಶೀಲನೆ ನಡೆಸಲಿ. ಮಂಡ್ಯದಿಂದ ನಿಖಿಲ್ ಅವರೇ ಸ್ಪರ್ಧೆ ಮಾಡಲಿ ಎಂದು ನಾಗಮಂಗದಲ್ಲಿ ಮಾಜಿ ಶಾಸಕ ಸುರೇಶ್ ಗೌಡ ಹೇಳಿಕೆ ನೀಡಿದ್ದಾರೆ.

ಷಡ್ಯಂತ್ರಗಳಿಂದ ನಿಖಿಲ್ ಸೋಲು

ನಿಖಿಲ್ ಅವರೇ ಚುನಾವಣೆಗೆ ನಿಲ್ಲಬೇಕು ಎಂಬುವುದು ಜಿಲ್ಲೆಯ ಎಲ್ಲಾ ನಾಯಕರ ಒಕ್ಕೊರಲ ಅಭಿಪ್ರಾಯವಾಗಿದೆ. ಬೇಕೊ ಬೇಡವೊ ನಿಖಿಲ್ ಅವರು ಕಡಿಮೆ ಅಂತರಿಂದ ಮಂಡ್ಯದಲ್ಲಿ ಸೋತಿದ್ದಾರೆ. ರಾಮನಗರದಲ್ಲೂ ಷಡ್ಯಂತ್ರಗಳಿಂದ ಸೋತಿದ್ದಾರೆ. ನಮಗೆ ಕೃತಜ್ಞತೆ ಇದ್ದು ಅವರೇ ನಿಲ್ಲಬೇಕು ಎಂಬುದು ಎಲ್ಲರ ಒತ್ತಾಯವಾಗಿದೆ ಎಂದು ಸುರೇಶ್ ಗೌಡ ಹೇಳಿದ್ದಾರೆ.

 

Related