ಮಂಡ್ಯದಿಂದ ಸ್ಪರ್ಧೆ ಮಾಡಲು ಸುಮಲತೆಗೆ ಬಿಜೆಪಿ ಟಿಕೆಟ್ ನೀಡುತ್ತಾ?

ಮಂಡ್ಯದಿಂದ ಸ್ಪರ್ಧೆ ಮಾಡಲು ಸುಮಲತೆಗೆ ಬಿಜೆಪಿ ಟಿಕೆಟ್ ನೀಡುತ್ತಾ?

ಮಂಡ್ಯ: ಕಳೆದ ಲೋಕಸಭಾ ಚುನಾವಣೆಯಂತೆ ಈ ಬಾರಿಯೂ ಮಂಡ್ಯ ಕ್ಷೇತ್ರ ಬಾರಿ ಸದ್ದು ಮಾಡುತ್ತಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಪೈಪೋಟಿಗಳ ಮಧ್ಯೆ ಸಂಸದೆ ಸುಮಲತಾ ಮಂಡ್ಯದಿಂದಲೇ ಸ್ಪರ್ಧೆ ಮಾಡುತ್ತಾರೆಂದು ಖಚಿತ ಮಾಹಿತಿ ಒಂದು ಅದಕ್ಕೆ ಬಂದಿದೆ.

ಹೌದು, ಸಂಸದೆ ಸುಮಲತಾ ಅಂಬರೀಶ್ ಅವರು ಈ ಬಾರಿ ಮಂಡ್ಯದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದು ಸುಮಲತಾ ಆಪ್ತ ಹಣಕೇರಿ ಶಿವಕುಮಾರ್ ತಿಳಿಸಿದ್ದಾರೆ. ಹಾಗಾದ್ರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸುಮಲತಾ ಅವರಿಗೆ ಬಿಜೆಪಿ ಟಿಕೆಟ್ ನೀಡುತ್ತಾ ಎಂದು ಸುಮಲತಾ ಬಳಗದಲ್ಲಿ ಪ್ರಶ್ನೆ ಕಾಡುತ್ತಿದೆ.

ಅಭಿವೃದ್ಧಿ ವಿಚಾರವಾಗಿ ಸುಮಲತಾ ಅವರು ರಾಜ್ಯದಲ್ಲೆ ಉತ್ತಮ ಸಂಸದರಾಗಿದ್ದಾರೆ. ಕಳೆದ MLA ಚುನಾವಣೆ ಸಂದರ್ಭ ಸುಮಲತಾ ಅವರು ಬಿಜೆಪಿಗೆ ಬೆಂಬಲ ನೀಡಿದ್ದರು. ಈ ಎಂಪಿ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸುಮಲತಾ ಅವರು ಮಂಡ್ಯದಲ್ಲೇ ಸ್ಪರ್ಧೆ ಮಾಡೋದಾಗಿ ಭರವಸೆ ನೀಡಿದ್ದಾರೆ ಎಂದರು.

 

Related