ಮೆಡಿಕಲ್ ಕಾಲೇಜ್‌ ಮೇಲೆ ಐಟಿ ದಾಳಿ

ಮೆಡಿಕಲ್ ಕಾಲೇಜ್‌ ಮೇಲೆ ಐಟಿ ದಾಳಿ

ದಾವಣಗೆರೆ : ಕಾಂಗ್ರೆಸ್ ಶಾಸಕ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಒಡೆತನದ ದಾವಣಗೆರೆಯ ಮೂರು ಕಾಲೇಜುಗಳಲ್ಲಿ ಅಧಿಕಾರಿಗಳಿಂದ ಕಡತ ಪರಿಶೀಲನೆ ನಡೆಸಲಾಗುತ್ತಿದ್ದು, ಆರು ಜನ ಐಟಿ ಅಧಿಕಾರಿಗಳ ತಂಡ ದಾವಣಗೆರೆ ಜೆಜೆಎಂ, ಎಸ್‌ಎಸ್ ಮೆಡಿಕಲ್ ಕಾಲೇಜ್ ಹಾಗೂ ಬಾಪೂಜಿ ಡೆಂಟಲ್ ಕಾಲೇಜ್‌ಗಳ ಮೇಲೆ ಬುಧವಾರ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ವಿದ್ಯಾರ್ಥಿಗಳ ಪ್ರವೇಶ ಹಾಗೂ ಕಾಲೇಜ್ ಆಡಳಿತ ಮಂಡಳಿ ಸಂಗ್ರಹಿಸಿದ ಶುಲ್ಕ ಮತ್ತು ಸರ್ಕಾರ ನಿಗದಿ ಮಾಡಿದ ಶುಲ್ಕದ ಬಗ್ಗೆ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಕೆಲ ವಿದ್ಯಾರ್ಥಿಗಳಿಗೆ ಅನಿರೀಕ್ಷಿತವಾಗಿ ಭೇಟಿ ಮಾಡಿ ಶುಲ್ಕ ತುಂಬಿದ ವಿವರವನ್ನು ಅಧಿಕಾರಿಗಳು ಪಡೆಯುತ್ತಿದ್ದಾರೆ. ಗೋವಾ ಹಾಗೂ ಬೆಳಗಾವಿಯಿಂದ ಬಂದ ಐಟಿ ಅಧಿಕಾರಿಗಳ ತಂಡದಿಂದ ಈ ದಾಳಿ ನಡೆದಿದೆ.

Related