ಇದು ಅಡಿಗೆಗೆ ಮಾತ್ರ ಸೀಮಿತವಲ್ಲ ಸೌಂದರ್ಯಕ್ಕೆ ಉಪಯೋಗವಾಗುತ್ತದೆ

ಇದು ಅಡಿಗೆಗೆ ಮಾತ್ರ ಸೀಮಿತವಲ್ಲ ಸೌಂದರ್ಯಕ್ಕೆ ಉಪಯೋಗವಾಗುತ್ತದೆ

ನಮ್ಮ ಮುಖದ ಕಾಂತಿಯನ್ನು ಹೆಚ್ಚಿಸಿಕೊಳ್ಳಲು ನಾವು ಮಾರುಕಟ್ಟೆಯಲ್ಲಿ ಸಿಗುವಂತ ವಿವಿಧ ರೀತಿಯ ಸೌಂದರ್ಯವರ್ಧಕಗಳನ್ನು ಬಳಸಿ ನಮ್ಮ ಮುಖದ ಕಾಂತಿಯನ್ನು ಹೆಚ್ಚಿಸಲು ಪ್ರಯತ್ನ ಮಾಡುತ್ತೇವೆ. ಆದರೆ ಮನೆಯಲ್ಲಿ ಸಿಗುವಂತಹ ಕೆಲವು ಪದಾರ್ಥಗಳನ್ನು ಉಪಯೋಗಿಸಿಕೊಂಡು ನಮ್ಮ ಸೌಂದರ್ಯವನ್ನು ನಾವು ಹೆಚ್ಚಿಸಿಕೊಳ್ಳಬಹುದು.

ಹೌದು ಮನೇಲಿ ಸಿಗುವಂತ ಸಾಸಿವೆಯನ್ನು ನಾವು ಉಪಯೋಗಿಸುವುದರಿಂದ ನಮ್ಮ ಮುಖದ ಚರ್ಮದ ಕಾಂತಿಯನ್ನು ನಾವು ಹೆಚ್ಚಿಸಿಕೊಳ್ಳಬಹುದು.

ಎರಡು ಚಮಚ ಸಾಸಿವೆಯನ್ನು ಮೊದಲಿಗೆ ಪುಡಿ ಮಾಡಿಕೊಳ್ಳಿ. ನಂತರ ಪುಡಿಗೆ ಒಂದು ಚಮಚ ಅಲೋವೆರಾ ಜೆಲ್ ಅನ್ನು ಹಾಕಿ ನಂತರ ಎರಡನ್ನು ಹೊಂದಿಕೊಳ್ಳುವವರೆಗೆ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಮುಖಕ್ಕೆ ಹಾಗೂ ಕುತ್ತಿಗೆಗೆ ಹಚ್ಚಿಕೊಳ್ಳಿ. ಇಪ್ಪತ್ತು ನಿಮಿಷಗಳ ಕಾಲ ಹಾಗೆ ಬಿಡಿ ನಂತರ ಮುಖವನ್ನು ಶುದ್ಧ ನೀರಿನಿಂದ ತೊಳೆಯಿರಿ. ಇದು ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ.

ಸಾಸಿವೆ ಪೌಡರ್ ಗೆ 1 ಚಮಚ ಮೊಸರನ್ನು ಮಿಶ್ರಣ ಮಾಡಿ. ನಂತರ ಈ ಪೇಸ್ಟ್ ಅನ್ನು ಮುಖ ಮತ್ತು ಕುತ್ತಿಗೆಗೆ ಹಚ್ಚಿಕೊಳ್ಳಿ ಹಾಗೂ ಒಣಗಲು ಬಿಡಿ. ಒಣಗಿದ ನಂತರ ಸ್ಕ್ರಬ್ ಮಾಡಿ, 5 ನಿಮಿಷಗಳ ನಂತರ ನೀರಿನಿಂದ ತೊಳೆಯಿರಿ. ಇದು ಟ್ಯಾನಾದ ಚರ್ಮವನ್ನು ಹಾಗೂ ಮೃತ ಚರ್ಮವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

ಸಾಸಿವೆ ಪುಡಿಗೆ 1 ಚಮಚ ನಿಂಬೆ ರಸವನ್ನು ಸೇರಿಸಿ. ಕೆಲವು ಚಮಚ ನೀರು ಸೇರಿಸಿ ದಪ್ಪ ಪೇಸ್ಟ್ ತಯಾರಿಸಿ. ಈ ಪೇಸ್ಟ್ ಮುಖ ಮತ್ತು ಕುತ್ತಿಗೆಗೆ ಹಚ್ಚಿಕೊಳ್ಳಿ. ಇದನ್ನು 15 ನಿಮಿಷಗಳ ಕಾಲ ಬಿಡಿ. ನಂತರ ಅದನ್ನು ನೀರಿನಿಂದ ತೊಳಿಯಿರಿ. ಇದು ಚರ್ಮದ ಶುಷ್ಕತೆಯನ್ನು ತೆಗೆದುಹಾಕುತ್ತದೆ ಮತ್ತು ಚರ್ಮವನ್ನು ಮೃದುವಾಗಿಸುತ್ತದೆ.

ಎರಡು ಚಮಚ ಸಾಸಿವೆ ಬೀಜಗಳನ್ನು ನುಣ್ಣಗೆ ರುಬ್ಬಿಕೊಳ್ಳಿ. ಅದರಲ್ಲಿ ಎರಡು ಚಮಚ ಕಡಳೆ ಹಿಟ್ಟು ಬೆರೆಸಿ ಎರಡು ಚಮಚ ಹಾಲು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ಈ ಪೇಸ್ಟ್ ಅನ್ನು ಮುಖ ಮತ್ತು ಕುತ್ತಿಗೆಗೆ ಹಚ್ಚಿ ಮತ್ತು 20 ನಿಮಿಷಗಳ ಕಾಲ ಹಾಗೆ ಬಿಡಿ. ಇದರ ನಂತರ, ನೀರಿನಿಂದ ಮುಖವನ್ನು ತೊಳೆಯಬೇಕು ಹೀಗೆ ಮಾಡುವುದರಿಂದ ನಿಮ್ಮ ಮುಖದ ಕಾಂತಿ ಹೆಚ್ಚಿಸುತ್ತದೆ.

Related