ಜ. 26 ಭಾರತದ ಇತಿಹಾಸದಲ್ಲಿ ವಿಶೇಷ ದಿನ: ಮಲ್ಲಿಕಾರ್ಜುನ್ ಖರ್ಗೆ

ಜ. 26 ಭಾರತದ ಇತಿಹಾಸದಲ್ಲಿ ವಿಶೇಷ ದಿನ: ಮಲ್ಲಿಕಾರ್ಜುನ್ ಖರ್ಗೆ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ 75ನೇ ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ನೆರವೇರಿಸಿದ ನಂತರ ಮಾತನಾಡಿದ ಅವರು, ಜನವರಿ 26 ನಮ್ಮ ಜೀವನದಲ್ಲಿ ಹಾಗೂ ಭಾರತದ ಇತಿಹಾಸದಲ್ಲಿ ವಿಶೇಷ ದಿನ ಈ ದೇಶದ ಸಂವಿಧಾನ ಅಸ್ತಿತ್ವದಲ್ಲಿ ಇಲ್ಲದೇ ಹೋಗಿದ್ದರೆ ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಆಗುತ್ತಿರಲಿಲ್ಲ ಇಷ್ಟೊಂದು ಪ್ರಯತ್ನ ಮಾಡಿ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿ ಸಂವಿಧಾನ ರಚಿಸಿದರು ಪ್ರಮುಖವಾಗಿ ದೇಶದ ಸಂವಿಧಾನದಲ್ಲಿ ಇರುವ ಪ್ರಮುಖ ಅಂಶಗಳು ಸಮಾನತೆ, ಭ್ರಾತೃತ್ವತೆ, ಜಾತ್ಯಾತೀತ ತತ್ವ ಇದೆಲ್ಲ ಕೂಡಿ ನಮ್ಮ ಸಂವಿಧಾನ ಆಗಿದೆ. ಇವತ್ತು ಸಂವಿಧಾನ ತಿರುಚುದು ಬದಲಾವಣೆ ಮಾಡಬೇಕು ಎಂಬ ಬಹಳ ದೊಡ್ಡ ಕುತಂತ್ರ ಆರ್ ಎಸ್ ಎಸ್ ಹಾಗೂ ಬಿಜೆಪಿ ಮಾಡುತ್ತಿದೆ.

ಸಂವಿಧಾನ ತಿದ್ದುಪಡೆ ಮಾಡಲು ಪ್ರಯತ್ನಿಸುತ್ತಿರುವ ಬಿಜೆಪಿಯವರು ಮತ್ತು ಆರ್ ಎಸ್ ಎಸ್ ನವರಿಗೆ ಯಾವುದೇ ಕಾರಣಕ್ಕೂ ಸಂವಿಧಾನ ತಿದ್ದುಪಡೆ ಮಾಡಲು ಸಾಧ್ಯವಿಲ್ಲ ಎಂದು ಈ ಸಂದರ್ಭದಲ್ಲಿ ಹೇಳಿದರು.

ಸ್ವಾಯತ್ತ ಸಂಸ್ಥೆಗಳನ್ನೆಲ್ಲ ನಾಶ ಮಾಡಬೇಕು ಅಂತ ಬಿಜೆಪಿ ಸರ್ವ ಪ್ರಯತ್ನ ಮಾಡ್ತಿದೆ ಮೋದಿಯವರು ಆರ್ ಎಸ್ ಎಸ್ ಕೈಗೊಂಬೆಯಾಗಿ ನಡೆದುಕೊಂಡಿದ್ದಾರೆ ಇದರಿಂದ ನ್ಯಾಯಾಂಗ ಹಾಗೂ ಜಾತ್ಯಾತೀತ ತತ್ವಕ್ಕೆ ದೊಡ್ಡ ಪೆಟ್ಟು ಬೀಳ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

 

 

Related