ಜ. 19ಕ್ಕೆ ಕರ್ನಾಟಕಕ್ಕೆ ಮೋದಿ ಆಗಮನ!

ಜ. 19ಕ್ಕೆ ಕರ್ನಾಟಕಕ್ಕೆ ಮೋದಿ ಆಗಮನ!

ಕಲಬುರಗಿ: ಲೋಕಸಭಾ ಚುನಾವಣೆ ಮುಗಿದ ನಂತರ ಕರ್ನಾಟಕ ರಾಜ್ಯಕ್ಕೆ ಮತ್ತೆ ನರೇಂದ್ರ ಮೋದಿಯವರು ಮೂರನೇ ಸಾರಿ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ನಾಳೆ ಜನವರಿ 19ರಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಕಲಬುರ್ಗಿ ನಗರಕ್ಕೆಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ಪಿಎಂ ಆವಾಸ್ ಯೋಜನೆಯಡಿ ಬಡವರಿಗೆ ಮನೆಗಳ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸೊಲ್ಲಾಪುರಕ್ಕೆ ತೆರಳಲಿರುವ ಅವರು ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದು ಮುಂದಿನ ಪ್ರಯಾಣ ಕೈಗೊಳ್ಳಲಿದ್ದಾರೆ.

ಜನವರಿ 19 ರಂದು ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಕಾರಣ ಕಲಬುರಗಿ ವಿಮಾನ ನಿಲ್ದಾಣದ ಸುತ್ತಮುತ್ತ 10 ಕಿಮೀ ವ್ಯಾಪ್ತಿಯಲ್ಲಿ ಡ್ರೋಣ್ ಕ್ಯಾಮರಾ ಹಾರಾಟ ನಿಷೇಧಿಸಲಾಗಿದೆ. CRPC ಸೆಕ್ಷನ್ 144 ಅಡಿಯಲ್ಲಿ ಡ್ರೋನ್ ಕ್ಯಾಮರಾ ಹಾರಾಟ ನಿಷೇಧಿಸಿ ಕಲಬುರಗಿ ಡಿಸಿ ಆದೇಶ ಹೊರಡಿಸಿದ್ದಾರೆ.

Related