ತೆನೆ ಬಿಟ್ಟು ʼಕೈʼ ಹಿಡಿದ ಜೆಡಿಎಸ್ ನಾಯಕರು..!

ತೆನೆ ಬಿಟ್ಟು ʼಕೈʼ ಹಿಡಿದ ಜೆಡಿಎಸ್ ನಾಯಕರು..!

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ ರಾಜಕೀಯದಲ್ಲಿ ಟಿಕೆಟ್ ಗಳಿಗಾಗಿ ಲಾಬಿಗಳು ನಡೆಯುತವಂತೆ ಈಗ ಪಕ್ಷ ಬಿಟ್ಟು ಪಕ್ಷಕ್ಕೆ ಸೇರುವವರ ಸಂಖ್ಯೆ ಹೆಚ್ಚಾಗಿ ನಡೆಯುತ್ತಿದೆ.

ಹೌದು, ಜೆಡಿಎಸ್ ನ ಭದ್ರಕೋಟೆ ಮಂಡ್ಯದಲ್ಲಿ ಜೆಡಿಎಸ್ ನಾಯಕರು ಪಕ್ಷ ತೊರೆದು ಈಗ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇನ್ನಿತರರು ಸಚಿವರ ಸಮ್ಮುಖದಲ್ಲಿ ಇಂದು ಜೆಡಿಎಸ್ ನಾಯಕರುಗಳು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.

ಪರಿಷತ್ ಸದಸ್ಯ ಮರಿತಿಬ್ಬೇಗೌಡ್ರು,ಮಾಜಿ ಪರಿಷತ್ ಸದಸ್ಯ ಅಪ್ಪಾಜಿಗೌಡ,ಮಂಡ್ಯ ಮಾಜಿ ಜೆಡಿಎಸ್ ಶಾಸಕ ಎಂ ಶ್ರೀನಿವಾಸ್ ಅಳಿಯ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್,ಮಂಡ್ಯ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ,ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ ಗಣಿಗ,ಮಂಡ್ಯ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.

ಮಂಡ್ಯ ಮಾಜಿ ಶಾಸಕ ಎಂ ಶ್ರೀನಿವಾಸ್ ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಅನಾರೋಗ್ಯ ಹಿನ್ನಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲು ಆಗಿದ್ದಾರೆ ಇಲ್ಲಿಂದಲ್ಲೇ ಎಂ ಶ್ರೀನಿವಾಸ್ ಅವ್ರನ್ನ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇನೆ ಆಸ್ಪತ್ರೆಗೆ ಹೋಗಿ ನಾನು ಭೇಟಿ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

 

Related