ಗುಡಿಬಂಡೆ: ಗುಡಿಬಂಡೆ ತಾಲ್ಲೂಕಿನ ದಪರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಸಣ ಕಾರ್ಮಿಕರಿಗೆ ಇಂದು ಶವಸಂಸ್ಕಾರಕ್ಕೆ ಅಗತ್ಯವಿರುವ ಸಾಮಗ್ರಿಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮವನ್ನು ಪಂಚಾಯಿತಿ ಪಿಡಿಒ ರಾಮಾಂಜಿನಪ್ಪ ಮತ್ತು ಪಂಚಾಯಿತಿ ಅಧ್ಯಕ್ಷ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಹಾಗೂ ತಮಟೆ ಕಲಾವಿದರ ಸಂಘದ ಚಿಕ್ಕಬಳ್ಳಾಪುರ ಜಿಲ್ಲಾ ಸಂಚಾಲಕ ಮುನಿಯಪ್ಪ ಕೆ. ಅವರು ಉಪಸ್ಥಿತರಿದ್ದು, ಕಾರ್ಮಿಕರಿಗೆ ಅವಶ್ಯಕ ಸಾಮಗ್ರಿಗಳನ್ನು ಹಸ್ತಾಂತರಿಸಿದರು. ಗೌರಿಬಿದನೂರು ತಾಲೂಕಿನ ಕಿರಿಯ ಇಂಜಿನಿಯರ್ ಮನೆ ಮೇಲೆ ಲೋಕಾ ದಾಳಿ
ಈ ಸಂದರ್ಭದಲ್ಲಿ ಅವರು ಮಾತನಾಡಿ, “ಮಸಣ ಕಾರ್ಮಿಕರ ಶ್ರಮವನ್ನು ಗೌರವಿಸುವುದು ಸಮಾಜದ ಕರ್ತವ್ಯ. ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಸ್ಮಶಾನ ಭೂಮಿಯ ಸ್ವಚ್ಛತೆ ಕಾರ್ಯಕ್ಕೆ 100 ದಿನದ ಉದ್ಯೋಗ ನೀಡುವ ಯೋಜನೆ ಜಾರಿಗೆ ತರಲಾಗುವುದು,” ಎಂದು ಭರವಸೆ ನೀಡಿದರು.
ಅವರು ಮುಂದುವರಿಸಿ, “ಮಸಣ ಕಾರ್ಮಿಕರಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ನಮ್ಮ ಸಂಘ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತದೆ,” ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಸ್ಥಳೀಯ ನಾಗರಿಕರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.
