ಪತ್ರಕರ್ತ ಆತ್ಮಹತ್ಯೆಗೆ ಯತ್ನ

ಪತ್ರಕರ್ತ ಆತ್ಮಹತ್ಯೆಗೆ ಯತ್ನ

ಕೋಲಾರ: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಪತ್ರಕರ್ತ ಅಶ್ವಥ ನಾರಾಯಣ ಆತ್ಮಹತ್ಯೆಗೆ ಯತ್ನಿಸಲು ಕಾರಣರಾದವರ ವಿರುದ್ಧ ತನಿಖೆ ನಡೆಸಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲು ಕೋರಿ ಕರ್ನಾಟಕ ಸಂಪಾದಕರ ಮತ್ತು ವರದಿಗಾರರ ಸಂಘ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ  ಅಪರ ಜಿಲ್ಲಾಧಿಕಾರಿಗಳು ಮುಖಾಂತರ ಮನವಿ ಸಲ್ಲಿಸಿದರು.

ಜಿಲ್ಲಾ ಕೇಂದ್ರದಲ್ಲಿ ಅಶ್ವಥನಾರಾಯಣ ಕನ್ನಡಪ್ರಭ ಜಿಲ್ಲಾ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆ ಸಂದರ್ಭದಲ್ಲಿ ಸ್ಥಳೀಯ ಆಡಳಿತದ ವೈಫಲ್ಯಗಳ ಬಗ್ಗೆ ಹಲವು ಬಾರಿ ವರದಿ ಮಾಡಿದ್ದರು. ಇದರಿಂದ ಕುಪಿತಗೊಂಡ ಪ್ರಭಾವಿಗಳು ಕನ್ನಡಪ್ರಭ ಸಂಪಾದಕ ರವಿಹೆಗಡೆರವರ ಜೊತೆಯಲ್ಲಿ ಷಢ್ಯಂತರ ಮಾಡಿ ಅಶ್ವಥನಾರಾಯಣರವರನ್ನು ಕೆಲಸದಿಂದ ವಜಾ ಮಾಡಿಸಲು ಸಂಚು ನಡೆಸಿದ್ದರು. ಸಂಪಾದಕ ರವಿ ಹೆಗಡೆರವರ ಮೇಲೆ ಪ್ರಭಾವ ಬೀರಿ ಅಶ್ವಥನಾರಾಯಣರವರಿಗೆ ಕಿರುಕುಳ ನೀಡುತ್ತಿದ್ದರು.

ಕನ್ನಡ ಪ್ರಭದಲ್ಲಿ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಅಶ್ವಥನಾರಾಯಣ್ ಕೆಲಸಕ್ಕೆ ರಾಜೀನಾಮೆ ನೀಡಿದರು. ಆ ನಂತರ ವಿಶ್ವವಾಣಿ ಜಿಲ್ಲಾ ವರದಿಗಾರರಾಗಿ ನೇಮಕವಾಗಿದ್ದರು.

ರಾತ್ರಿ ಸುಮಾರು 12 ಗಂಟೆಯಲ್ಲಿ ಬಾಗೇಪಲ್ಲಿಯ ಗಡಿದಂ ದೇವಾಲಯದ ಬಳಿ ಪೊಲೀಸರು ಪತ್ತೆಹಚ್ಚಿ ಅವರನ್ನು ಸಚಿವ ಸುಧಾಕರ್ ಸುಪರ್ಧಿಯಲ್ಲಿ ಬೆಂಗಳೂರಿನ ಹೆಬ್ಬಾಳದ ಕೊಲಂಬಿಯ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಿದರು. ಚಿಕಿತ್ಸೆಯಿಂದ ಅಶ್ವಥ್‌ನಾರಾಯಣ್ ಚೇತರಿಸಿಕೊಂಡಿದ್ದಾರೆ.

ಆತ್ಮಹತ್ಯೆಗೆ ಯತ್ನಿಸುವ ಮೊದಲು ಧೀರ್ಘವಾದ ಡೆತ್‌ನೋಟ್ ಬರೆದಿದ್ದಾರೆ.  ಅದರಲ್ಲಿರುವ ಎಲ್ಲಾ ಅಂಶಗಳ ಬಗ್ಗೆ ಪೂರ್ಣ ಪ್ರಮಾಣದಲ್ಲಿ ತನಿಖೆ ನಡೆಸಿ ಕಾನೂನು ರೀತಿಯ ಕ್ರಮ ಕೈಗೊಂಡು ಪತ್ರಕರ್ತರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಕರ್ನಾಟಕ ಸಂಪಾದಕರ ಮತ್ತು ವರದಿಗಾರರ ಸಂಘವು ಮುಖ್ಯಮಂತ್ರಿಗಳಲ್ಲಿ ಒತ್ತಾಯಿಸಿದೆ.

 

 

Related