ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 5 ಕೋಟಿ

ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 5 ಕೋಟಿ

ಬೆಂಗಳೂರು , ಮಾ.06 :  ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಐದು ಕೋಟಿ ರೂ.ಗಳ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಸರ್ಕಾರ ಮತ್ತು ಸಾರ್ವಜನಿಕ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸಲು ಜನ ಸ್ನೇಹಿ ಸಹಾಯ ವೇದಿಕೆ ಯೋಜನೆಯನ್ನು ಪ್ರಾರಂಭಿಸಲಾಗಿದೆ.

ಸಾರ್ವಜನಿಕ ಕ್ಷೇತ್ರದಿಂದ ಈ ಯೋಜನೆಗೆ ಉತ್ತಮ ಅಭಿಪ್ರಾಯ ವ್ಯಕ್ತವಾಗಿದ್ದು, ವಿವಿಧ ಇಲಾಖೆಗಳ ಜತೆ ಸಮನ್ವಯ ಸಾಧಿಸಿ ಪರಿಣಾಮಕಾರಿಯಾಗಿ ಕೆಲಸ ಮಾಡಲು 5 ಕೋಟಿ ಅನುದಾನ ಒದಗಿಸಲಾಗಿದೆ. ಸರ್ಕಾರದ ಕಾರ್ಯಕ್ರಮಗಳನ್ನು ನವ ಮಾಧ್ಯಮಗಳ ಮೂಲಕ ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ತಲುಪಿಸಲು ಡಿಜಿಟಲ್ ಮಾಧ್ಯಮ ಜಾಹೀರಾತು ನೀತಿ ರೂಪಿಸಲಾಗುವುದು.

Related