Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪತ್ರಕರ್ತರು ಸಮಾಜದ 4ನೇ ಕಣ್ಣು ಇದ್ದಂತೆ: ಎಂ.ಬಿ. ಪಾಟೀಲ 
  • Front news
  • Politics
  • State

ಪತ್ರಕರ್ತರು ಸಮಾಜದ 4ನೇ ಕಣ್ಣು ಇದ್ದಂತೆ: ಎಂ.ಬಿ. ಪಾಟೀಲ 

admin July 21, 2025
Spread the love

ವಿಜಯಪುರ: ಪತ್ರಕರ್ತರ ಸಕಲ ಸಮಸ್ಯೆ ನಿವಾರಣೆಗಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅದಕ್ಕೆ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ಪ್ರಾಮಾಣಿಕವಗಿ ಪ್ರಯತ್ನ ಮಾಡುವ ಜೊತೆಗೆ ಪತ್ರಕರ್ತರ ಆರೋಗ್ಯ ರಕ್ಷಣೆಗಾಗಿ ಐದು ಲಕ್ಷ ರೂ.ಗಳ ಠೇವಣಿ ಇರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಘೋಷಿಸಿದರು.

ವಿಜಯಪುರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ, ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಈ ವೇಳೆ ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಅವರು ಪತ್ರಕರ್ತರ ಆರೋಗ್ಯಕ್ಕಾಗಿ ಠೇವಣಿ ಇರಿಸಿ ಎಂಬ ಮನವಿಗೆ ವೇದಿಕೆಯಲ್ಲಿಯೇ ಸ್ಪಂದಿಸಿ ಸಚಿವ ಪಾಟೀಲ ಠೇವಣಿ ಇರಿಸುವ ಭರವಸೆ ನೀಡಿದರು.

ನಂತರ ಸಂದೇಶ ಮುಂದುವರೆಸಿದ ಸಚಿವ ಪಾಟೀಲರು, ಸ್ವಾತಂತ್ರ್ಯಪೂರ್ವದಲ್ಲಿ, ಸ್ವಾತಂತ್ರ್ಯ ಚಳವಳಿಯಲ್ಲಿ ಹಾಗೂ ಸ್ವಾತಂತ್ರ್ಯ ನಂತರದಲ್ಲಿ ಪತ್ರಿಕೋದ್ಯಮ ನಾಲ್ಕನೇಯ ಸ್ತಂಭವಾಗಿ ಮಹತ್ವದ ಪಾತ್ರ ವಹಿಸುತ್ತಲೇ ಬಂದಿದೆ ಎಂದರು.

ಈಗ ಡಿಜಿಟಿಲ್ ಮಿಡಿಯಾ ಕಾಲ, ಮೊಬೈಲ್ ಪರದೆಯಲ್ಲಿಯೇ ಅಂತಾರಾಷ್ಟ್ರೀಯ ಪತ್ರಿಕೆ, ಟಿವಿ ವೀಕ್ಷಿಸಬಹುದು, ಉಳಿದ ದೇಶಗಳಲ್ಲಿ ಮುದ್ರಣ ಮಾಧ್ಯಮಗಳು ಸಂಪೂರ್ಣ ಕ್ಷೀಣಿಸಿವೆ, ಕೃತಕ ಬುದ್ಧಿಮತ್ತೆ ಪತ್ರಿಕೋದ್ಯಮಕ್ಕೂ ಸಹ ಪರಿಣಾಮ ಬೀರಿದೆ, ಈ ಎಲ್ಲ ಸವಾಲುಗಳನ್ನು ಎದುರಿಸಬೇಕಿದೆ ಎಂದರು.

ಪತ್ರಕರ್ತರಿಗೆ, ರಾಜಕಾರಣಿ, ಪೊಲೀಸರಿಗೆ ರವಿವಾರ ಇಲ್ಲವೇ ಇಲ್ಲ, ಅಷ್ಟೊಂದು ಕಾರ್ಯ ಒತ್ತಡ ಈ ಕ್ಷೇತ್ರಗಳ ಮೇಲಿವೆ ಎಂದರು.

ಡಾ.ಫ.ಗು. ಹಳಕಟ್ಟಿ ಅವರು ಆರಂಭಿಸಿದ ನವ ಕರ್ನಾಟಕ ಪತ್ರಿಕೆ ಕರ್ನಾಟಕ ಏಕೀಕರಣಕ್ಕೆ ಬಹುದೊಡ್ಡ ಕೊಡುಗೆ ನೀಡಿತು, ಆ ಮೂಲಕ ವಿಜಯಪುರ ಜಿಲ್ಲೆ ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆ ಅನನ್ಯ, ಸಂಯುಕ್ತ ಕರ್ನಾಟಕದ ಅನನ್ಯ ಚೇತನ ಮೊಹರೆ ಹನುಮಂತರಾಯರು, ವಿ.ಬಿ. ನಾಯಕರು, ಟಿ.ಕೆ. ನಾಯಕರು ಹೀಗೆ ಅನೇಕ ಪತ್ರಕರ್ತರು ಪತ್ರಿಕೋದ್ಯಮಕ್ಕೆ ಕೊಡುಗೆ ನೀಡಿದ್ದಾರೆ ಎಂದರು.

ವೈಜ್ಞಾನಿಕ, ಸಂಶೋಧನಾತ್ಮಕ ಬರಹಗಳು ಮೂಡಿಬರಲಿ

ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಮಾತನಾಡಿ, ವೈಜ್ಞಾನಿಕ ಹಾಗೂ ಸಂಶೋಧನಾತ್ಮಕ ಬರವಣಿಗೆಗಳು ಇಲ್ಲದೇ ಇರುವುದರಿಂದ‌ ಸಮಾಜಕ್ಕೆ ಅನೇಕ ರೀತಿಯ ಹಿನ್ನಡೆಯಾಗಿದೆ, ಈ ನಿಟ್ಟಿನಲ್ಲಿ ಸಂಶೋಧನಾತ್ಮಕ, ವೈಜ್ಞಾನಿಕ ನೆಲೆಗಟ್ಟಿನ ವಿಚಾರಗಳು ಪ್ರಸಾರಗೊಳ್ಳಬೇಕಿದೆ ಎಂದರು.

ದೃಶ್ಯ ಮಾಧ್ಯಮಗಳಿಗೆ ಬ್ರೇಕಿಂಗ್ ನ್ಯೂಸ್ ಪ್ರಥಮಾದ್ಯತೆಯಾಗಿ ಪ್ರಗತಿ ಎರಡನೇಯ ಆದ್ಯತೆಯಾಗಿದೆ, ಆದರೆ ಪತ್ರಿಕೆಗಳಿಗೆ ಪ್ರಗತಿ ವಿಷಯವೇ ಅಗ್ರವಾಗಿರುವುದು ಸಂತೋಷದ ಸಂಗತಿ ಎಂದರು.

ಡಾ.ಫ.ಗು. ಹಳಕಟ್ಟಿ, ಮೊಹರೆ ಹನುಮಂತರಾಯರು ಪತ್ರಿಕಾ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ಪತ್ರಕರ್ತರ ಮೇಲಿದೆ ಎಂದರು. ಶಿವನ ಮೂರನೇಯ ಕಣ್ಣಿನಂತೆ ಪತ್ರಕರ್ತರು ಸಹ ಸಮಾಜದ ನಾಲ್ಕನೇಯ ಕಣ್ಣು ಇದ್ದಂತೆ, ಸಮಾಜದ ಸಮಸ್ಯೆಗಳ ನಿವಾರಣೆಗಾಗಿ ಪತ್ರಕರ್ತರು ಕಣ್ಣು ತೆರೆಯಬೇಕು ಎಂದರು.

ರಾಜ್ಯ ಸರ್ಕಾರ ಪತ್ರಕರ್ತರ ಹಿತರಕ್ಷಣೆಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಪತ್ರಕರ್ತರ ಆರೋಗ್ಯ ರಕ್ಷಣೆಗಾಗಿ ಠೇವಣಿ ಇರಿಸುವ ಕಾರ್ಯಕ್ಕೆ ನಾನು ಕೈ ಜೋಡಿಸುವೆ ಎಂದು ಐದು ಲಕ್ಷ ರೂ.ಗಳ ಠೇವಣಿ ಇರಿಸುವುದಾಗಿ ಘೋಷಿಸಿದರು.

About the Author

admin

Administrator

Visit Website View All Posts

Spread the love

Post navigation

Previous: ಇ-ಸ್ವತ್ತು ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ
Next: ಅಂದ ಮಕ್ಕಳೊಂದಿಗೆ ಮಲ್ಲಿಕಾರ್ಜುನ ಖರ್ಗೆ ರವರ ಹುಟ್ಟು ಹಬ್ಬ ಆಚರಣೆ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.