ಹಾಸನಕ್ಕೆ ಜೆಪಿ ನಡ್ಡಾ ಆಗಮನ

ಹಾಸನಕ್ಕೆ ಜೆಪಿ ನಡ್ಡಾ ಆಗಮನ

ಹಾಸನ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿದ್ದಾರೆ. ನಿನ್ನೆ ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳ ಪ್ರವಾಸ ಮಾಡಿದ್ದು, ಇಂದು ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವ ನ್ನು ಬಿಜೆಪಿಯ ರಾಷ್ಟ್ರಾಧ್ಯಕ್ಷರಾದ ಜೆಪಿ ನಡ್ಡಾ ಅವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಧ್ಯಕ್ಷರಾದ ನಳಿನ್, ಕಟೀಲ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಅರುಣ್ ಸಿಂಗ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ ರವಿ, ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್, ಪ್ರಕಾಶ್, ಸುರಭಿ ರಘು, ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

 

 

 

Related