ಕೆ ಅತೀಕ್‌ ಸಿಎಂ ಅಪರ ಮುಖ್ಯ ಕಾರ್ಯದರ್ಶಿಯಾಗಿ ಆಯ್ಕೆ

ಕೆ ಅತೀಕ್‌ ಸಿಎಂ ಅಪರ ಮುಖ್ಯ ಕಾರ್ಯದರ್ಶಿಯಾಗಿ ಆಯ್ಕೆ

ಬೆಂಗಳೂರು: ಹಿರಿಯ ಐಎಎಸ್‌ ಅಧಿಕಾರಿ ಎಲ್‌.ಕೆ.ಅತೀಕ್‌ ಅವರು ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಈವರೆಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅತೀಕ್‌ ಅವರು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಜತೆಗೆ ಹಣಕಾಸು ಇಲಾಖೆಯ ಹುದ್ದೆಯಲ್ಲೂ ಮುಂದುವರಿಯಲಿದ್ದಾರೆ.

ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯರ್ಶಿಯಾಗಿದ್ದ ರಜನೀಶ್‌ ಗೋಯಲ್‌ ಅವರನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಿದೆ. ನವೆಂಬರ್‌ 30ರಂದು ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್‌ ಗೋಯಲ್‌ ಅಧಿಕಾರ ವಹಿಸಿಕೊಳ್ಳಲಿದ್ಧಾರೆ.

 

Related