‘ಕಮಲ’ ಪುತ್ರ ‘ಕೈ’ ಸದಸ್ಯ-ಅಧಿಕೃತ ಸೇರ್ಪಡೆ

‘ಕಮಲ’ ಪುತ್ರ ‘ಕೈ’ ಸದಸ್ಯ-ಅಧಿಕೃತ ಸೇರ್ಪಡೆ

ಬೆಂಗಳೂರು : ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಇನ್ನು ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಹ-ಸದಸ್ಯತ್ವ ಪಡೆಯಲಿದ್ದಾರೆ.

ಸಹ ಸದಸ್ಯತ್ವ ಪಡೆಯಲಿರುವ ಸಂಬಂಧ ಇದಾಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಅವರು ಮಾತುಕತೆ ನಡೆಸಿರುವ ಶರತ್ ಬಚ್ಚೇಗೌಡ ಅವರು ಕೆಲವು ದಿನಗಳಿಂದ ನಡೆದಿರುವ ತೆರೆ ಎಳೆದಿದ್ದಾರೆ.

ಗುರುವಾರ ಬೆಳಗ್ಗೆ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಅವರು ಸದಸ್ಯತ್ವ ನೀಡಲಿದ್ದಾರೆ. ಕಾಂಗ್ರೆಸ್ ಪಕ್ಷದ ನಿಲುವು ಮತ್ತು ನನ್ನ ನಿಲುವು ಒಂದೇ ಆಗಿರುವ ಹಿನ್ನೆಲೆಯಲ್ಲಿ ಸಿಎಲ್‌ಪಿ ಸದಸ್ಯತ್ವ ಪಡೆಯಲು ತೀರ್ಮಾನಿಸಿದ್ದೇನೆ. ನನ್ನ ಬೆಂಬಲಿಗರೂ ಅದಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದ್ದರು.

2018 ರಲ್ಲಿ ಬಿಜೆಪಿ ಅಭ್ಯರ್ಥಿ ಆಗಿದ್ದ ಶರತ್ ಬಚ್ಚೇಗೌಡ. ನಂತರ ಕಾಂಗ್ರೆಸ್ ಅಭ್ಯರ್ಥಿ ಎಂಟಿಬಿ ವಿರುದ್ಧ ಸೋಲು ಕಂಡಿದ್ದರು. ನಂತರ ಟಿಕೆಟ್ ಸಿಗಲಿಲ್ಲ ಎನ್ನುವ ಕಾರಣಕ್ಕೆ ಪಕ್ಷೇತರ ಅಭ್ಯರ್ಥಿ ಆಗಿ ಗೆದ್ದಿರುವ ಶರತ್ ಬಚ್ಚೇಗೌಡ ಈಗ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಲು ಮುಂದಾಗಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಂದ ಡಿ.ಕೆ.ಶಿವಕುಮಾರ್ ಅವರು ಶರತ್ ಬಚ್ಚೇಗೌಡ ಪಕ್ಷ ಸೇರ್ಪಡೆಗೆ ಅನುಮತಿ ಪಡೆದುಕೊಂಡಿದ್ದರು. ಆದರೆ, ನಿಯಮದ ಪ್ರಕಾರ ಶರತ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಸಾಧ್ಯವಿಲ್ಲ. ಆದ್ದರಿಂದ ಅವರು ಕಾಂಗ್ರೆಸ್‌ನ ಶಾಸಕಾಂಗ ಪಕ್ಷದ ಸಹ ಸದಸ್ಯರಾಗಲಿದ್ದಾರೆ.

Related