ಕಲಬುರಗಿ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ಕಲಬುರಗಿ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಅವಾಚ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ನಮೋ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.

ಹೌದು, ಕೆಲವು ದಿನಗಳ ಹಿಂದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಅವರನ್ನು ಅವಚ್ಛೆ ಶಬ್ದಗಳಿಂದ ಸೂಲಿಬೆಲೆಯವರು ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಸೂಲಿಬೆಲೆ ಅವರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.

ಕಲಬುರಗಿ ಜಿಲ್ಲಾ ಘಟಕದ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ್​ ಅವರು ಕಲಬುರಗಿ ಪೊಲೀಸ್ ಆಯುಕ್ತ ಆರ್​.ಚೇತನ್​ಗೆ ದೂರು ಸಲ್ಲಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆರನ್ನು ಚಕ್ರವರ್ತಿ ಸೂಲಿಬೆಲೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಸೂಲಿಬೆಲೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ರಾಯಚೂರಿನ ಶಿರವಾದಲ್ಲಿ ನಡೆದ ‘ನಮೋ ಭಾರತ’ ಎಂಬ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರು ಖರ್ಗೆ ಫ್ಯಾಮಿಲಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಕಲಬುರಗಿಯ ESI ಆಸ್ಪತ್ರೆ ನಿರ್ಮಾಣದ ವಿಚಾರವಾಗಿ ಖರ್ಗೆ ಕುಟುಂಬದ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದರು. ಖರ್ಗೆ ಸಾಹೇಬರ ಕಾಲದಲ್ಲಿ ESI ಆಸ್ಪತ್ರೆ ನಿರ್ಮಾಣ‌ ಮಾಡಲಾಯಿತು. ಆಸ್ಪತ್ರೆ ಮೇಲ್ಭಾಗದಲ್ಲಿ ಡ್ರೋನ್ ಕ್ಯಾಮರಾದಿಂದ ನೋಡಿದರೆ ಈ ಚಿತ್ರ ಕಾಣುತ್ತದೆ.

ಮೊದಲ ಅಕ್ಷರ ಖ, ಎರಡನೇ ಅಕ್ಷರ ಗೆ, ಆ ಮೇಲೆ ಅರ್ಧ ಅಕ್ಷರ ಖರ್ಗೆ ಅಂತಾ. ಅವರು ಕಟ್ಟಿದ ಬಿಲ್ಡಿಂಗ್ ಮೇಲೆ ಖರ್ಗೆ ಅಂತಾ ಕಾಣಬೇಕು. ಕಟ್ಟಡ ಇರೋವರೆಗೆ ಅವರ ಹೆಸರು ಉಳಿಬೇಕು ಅಂತಾ ಈ ರೀತಿ ಮಾಡಲಾಗಿದೆ. ಇದು ಅವರ ಸ್ವಂತ ದುಡ್ಡಲ್ಲ, ಪಾರ್ಟಿ ದುಡ್ಡಲ್ಲ ಜನರ ತೆರಿಗೆ ದುಡ್ಡಲ್ಲಿ ತಮ್ಮ ಹೆಸರು ಶಾಶ್ವತಗೊಳಿಸುವಂತ ಅಯೋಗ್ಯರಿದ್ದಾರೆ ಎಂದು ಕಿಡಿಕಾರಿದ್ದರು. ಸದ್ಯ ಈ ಸಂಬಂದ ದೂರು ದಾಖಲಾಗಿದೆ.

Related