Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ: ಸಿಎಂ
  • Bangalore
  • Politics
  • State

ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ: ಸಿಎಂ

admin April 22, 2025 1 minute read
Spread the love

ಬೆಂಗಳೂರು: ತಪ್ಪು ಯಾರೇ ಮಾಡಲಿ ಅದು ತಪ್ಪೇ. ಕಾನೂನು ರೀತಿಯಲ್ಲಿ ತಪ್ಪು ಮಾಡಿದವರಿಗೆ ಯಾವ ರೀತಿ ಶಿಕ್ಷೆಯಾಗುತ್ತದೆ ಅದು ಎಲ್ಲರಿಗೂ ಸಮವಾಗಿರುತ್ತದೆ. ಕಾನೂನು ಎಲ್ಲರ ದೃಷ್ಟಿಯಲ್ಲಿ ಸಮಾನ. ಹಾಗಾಗಿ ತಪ್ಪು ಮಾಡಿದವರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಗರದಲ್ಲಿ ಇಂದು (ಮಂಗಳವಾರ ಏ. 22) ರಂದು ಐಎಎಫ್ ವಿಂಗ್ ಕಮಾಂಡರ್ ಯುವಕನ ಮೇಲೆ ಹಲ್ಲೆ ವಿಚಾರವಾಗಿ ಕಾನೂನು ಕ್ರಮಕ್ಕೆ ಸೂಚಿಸಲಾದ್ದು, ವಿಂಗ್ ಕಮಾಂಡರ್ ಆಗಲಿ ಯಾರೇ ಆಗಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್!

ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ ಎಂದಿದ್ದಾರೆ. ದೇಶದ ಮೂಲೆ ಮೂಲೆಗಳಿಂದ ಬಂದು ಇಲ್ಲಿ ನೆಲೆಸಿರುವ ಪ್ರತಿಯೊಬ್ಬರನ್ನು ಗೌರವದಿಂದ ಕಾಣುತ್ತಿರುವ, ಅವರನ್ನೂ ಕನ್ನಡಿಗರೇ ಎಂದು ಪ್ರೀತಿಸುವ ಸಂಸ್ಕೃತಿ ಕನ್ನಡ ಮಣ್ಣಿನದ್ದು. ಇದಕ್ಕೆ ಇತಿಹಾಸ ಸಾಕ್ಷಿ. ರಾಷ್ಟ್ರೀಯ ಮಾಧ್ಯಮಗಳು ತಮ್ಮ ಜವಾಬ್ದಾರಿ ಮತ್ತು ವೃತ್ತಿಧರ್ಮ ಮರೆತು ಯಾರೋ ಒಬ್ಬ ಮಾಡಿದ ಆಧಾರ ರಹಿತ ಆರೋಪವನ್ನು ಹಿಡಿದುಕೊಂಡು ಇಡೀ ಕರ್ನಾಟಕದ ಘನತೆಗೆ ಮಸಿಬಳಿಯುವ ಕೆಲಸವನ್ನು ಮಾಡಿದ್ದು ನಿಜಕ್ಕೂ ವಿಷಾದನೀಯ. ಇದರಿಂದ ಪ್ರತಿಯೊಬ್ಬ ಕನ್ನಡಿಗನ ಮನಸಿಗೆ ಘಾಸಿಯಾಗಿದೆ ಎಂದು ಹೇಳಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಕೋರ್ಟ್​ನಿಂದ ಪ್ರಜ್ವಲ್​ ರೇವಣ್ಣಗೆ ಮತ್ತೊಂದು ಶಾಕ್
Next: ಉಗ್ರರ ದಾಳಿಗೆ ಹಲವರು ಬಲಿ: ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.