ಬೆಂಗಳೂರು: ಕೆಎಎಸ್ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿರುವ ಕೆಪಿಎಸ್ಸಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣಗೌಡರ ನೇತೃತ್ವದಲ್ಲಿ ಇಂದು (ಸೋಮವಾರ ಮಾ. 10) ರಂದು ಬೆಳಿಗ್ಗೆ 11 -30 ಗಂಟೆಗೆ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಯಿತು. ಇದನ್ನೂ ಓದಿ: ಸರ್ಕಾರಿ ಕಚೇರಿಗಳಿಗೆ ಉಪ ಲೋಕಾಯುಕ್ತ ದಿಡೀರ್ ಭೇಟಿ
ಈ ಹೋರಾಟಕ್ಕೆ ನಾಡಿನ ವಿವಿಧ ಮಠಾಧೀಶರು, ಸಾಹಿತಿಗಳು ರೈತ ಮತ್ತು ದಲಿತ ಸಂಘಟನೆಗಳ ಮುಖಂಡರು ಹಾಗೂ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿದ್ದರು.
