ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಸಮಾರಂಭ

ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಸಮಾರಂಭ

ಬೆಂಗಳೂರು: ಕೆಂಪೇಗೌಡ ಜಯಂತಿ ಅಂಗವಾಗಿ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ವಿಧಾನಸೌಧದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಸಮಾರಂಭ ಮಾಡಲಾಯಿತು.

ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧ ಮುಂಭಾಗ ಪುರಜ್ಯೋತಿ ಸ್ವೀಕರಿಸಿ ಕೆಂಪೇಗೌಡರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು.

ಈ ಸಂದರ್ಭದಲ್ಲಿ ಶಿರಾದ ಸ್ಪಟಿಕಪುರಿ ಮಠದ ನಂಜಾವದೂತ ಸ್ವಾಮೀಜಿ, ಚಂದ್ರಶೇಖರನಾಥ ಸ್ವಾಮೀಜಿ, ಸಚಿವರಾದ ಕೆ ಜೆ ಜಾರ್ಜ್, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಶಾಸಕರಾದ ರಿಜ್ವಾನ್ ಅರ್ಶದ್, ವಿಶ್ವನಾಥ್, ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ, ಸದಸ್ಯರಾದ ನಾಗರಾಜ ಯಾದವ್, ಅ ದೇವೇಗೌಡ, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಕಮಿಷನರ್ ವಿನಯ್, ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ, ಪ್ರಶಸ್ತಿ ವಿಜೇತರಾದ ಜಯದೇವ ಹೃದ್ರೋಗ ಆಸ್ಪತ್ರೆ ಎಂ.ಡಿ. ಡಾ ಸಿ ಎನ್ ಮಂಜುನಾಥ್, ನಿತಿನ್ ಕಾಮತ್ ಪೋಷಕರು ಭಾಗವಹಿಸಿದ್ದರು.

 

 

Related