Vikrant Rona : ಕಿಚ್ಚನ ಚಿತ್ರಕ್ಕೆ ಸಲ್ಮಾನ್ ಖಾನ್ ಸಾಥ್..!!

ಮೇ 16ರಂದು ವಿಕ್ರಾಂತ್ ರೋಣ ಚಿತ್ರದಿಂದ ಬಿಗ್ ಅಪ್ ಡೇಟ್ ನೀಡುವುದಾಗಿ ಕಿಚ್ಚ ಆಂಡ್ ಟೀಂ ಘೋಷಣೆ ಮಾಡಿದ್ದರು. ವಿಕ್ರಾಂತ್ ರೋಣನಿಂದ ಬರುವ ಅಪ್ ಡೇಟ್ ಏನಾಗಿರಲಿದೆ ಎಂದು ಅಭಿಮಾನಿಗಳು ಸಹ ಕಾತರದಿಂದ ಕಾಯುತ್ತಿದ್ದರು. ಇದೀಗ ಕುತೂಹಲಕ್ಕೆ ತೆರೆಬಿದ್ದಿದೆ. ಚಿತ್ರಕ್ಕೆ ಸಲ್ಮಾನ್ ಖಾನ್ ಸಾಥ್ ನೀಡಿದ್ದಾರೆ ಎಂದು ಚಿತ್ರತಂಡ ಬಹಿರಂಗ ಪಡಿಸಿದೆ.


ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್(Sudeep) ಸದ್ಯ ವಿಕ್ರಾಂತ್ ರೋಣ(Vikrant Rona) ಸಿನಿಮಾ ಬಿಡುಗಡೆ ತಯಾರಿಯಲ್ಲಿದ್ದಾರೆ. ಈಗಾಗಲೇ ಪೋಸ್ಟರ್ ಮತ್ತು ಟೀಸರ್ ಮೂಲಕ ಭಾರಿ ನಿರೀಕ್ಷೆ ಮೂಡಿಸಿರುವ ವಿಕ್ರಾಂತ್ ರೋಣನನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಸಿನಿಮಾಗೆ ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಸಾಥ್ ನೀಡಿದ್ದಾರೆ. ವಿಕ್ರಾಂತ್ ರೋಣ ಹಿಂದಿ ವರ್ಷನ್ ಅನ್ನು ಸಲ್ಮಾನ್ ಖಾನ್ ಪ್ರೆಸೆಂಟ್ ಮಾಡುತ್ತಿದ್ದಾರೆ. ಈ ಬಗ್ಗೆ ಸಿನಿಮಾ ತಂಡ ಬಹಿರಂಗ ಪಡಿಸಿದೆ. ಸಲ್ಮಾನ್ ಖಾನ್ ಕೂಡ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ‘ಕಿಚ್ಚ ಸುದೀಪ್ ಅವರ ವಿಕ್ರಾಂತ್ ರೋಣ 3ಡಿ ಅನುಭವವನ್ನು ಹಿಂದಿಯಲ್ಲಿ ಪ್ರೆಸೆಂಟ್ ಮಾಡುತ್ತಿರುವುದು ಸಂತೋಷವಾಗುತ್ತಿದೆ’ ಎಂದು ಹೇಳಿದ್ದಾರೆ. ಈ ಮೊದಲು ಅಂದರೆ ವಿಕ್ರಾಂತ್ ರೋಣ ಸಿನಿಮಾದ ಟೀಸರ್ ಅನ್ನು ಸಲ್ಮಾನ್ ಖಾನ್ ರಿಲೀಸ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.

Related