ಮತ್ತೊಂದು ದಾಖಲೆ ಸೃಷ್ಟಿಸಿದ ಕೊಹ್ಲಿ..!

ಮತ್ತೊಂದು ದಾಖಲೆ ಸೃಷ್ಟಿಸಿದ ಕೊಹ್ಲಿ..!

ಬೆಂಗಳೂರು: ಬೆಂಗಳೂರಿನಲ್ಲಿರುವ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೆನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ಮತ್ತು ಲಕ್ನೋ ಸೂಪರ್, ಜೈನ್ಸ್ ಮುಖಾಮುಖಿಯಾಗಿದ್ದು ಈ ಪಂದ್ಯದಲ್ಲಿ ಜಯಭೇರಿ ಬಾರಿಸಿದೆ.

ಇನ್ನು ಆರ್.ಸಿ.ಬಿ ಪಂದ್ಯ ಸೋತಿದ್ದರು ಕೂಡ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ. ಹೌದು, ವಿರಾಟ್ ಕೊಹ್ಲಿ ಈ ಬಾರಿ ಐಪಿಎಲ್ ಪಂದ್ಯದಲ್ಲಿ ದಾಖಲೆ ಮೇಲೆ ದಾಖಲೆಯನ್ನು ಬರೆಯುತ್ತಿದ್ದು ಈಗ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ.

ನಿನ್ನೆ ನಡೆದ ಪಂದ್ಯದಲ್ಲಿಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 16 ಎಸೆತಗಳಲ್ಲಿ 2 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ 22 ರನ್ ಬಾರಿಸಿ ಔಟಾಗಿದ್ದರು. ಇದಾಗ್ಯೂ ಈ 3 ಬೌಂಡರಿಗಳೊಂದಿಗೆ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದರು.

ಈ ಪಂದ್ಯದಲ್ಲಿ ಬಾರಿಸಿದ 2 ಫೋರ್ ಹಾಗೂ 1 ಸಿಕ್ಸ್​​ನೊಂದಿಗೆ ವಿರಾಟ್ ಕೊಹ್ಲಿ ಐಪಿಎಲ್​ನಲ್ಲಿ 900+ ಬೌಂಡರಿ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡರು. ಅಲ್ಲದೆ ಒಂದೇ ತಂಡದ ಪರ ಅತ್ಯಧಿಕ ಬೌಂಡರಿ ಬಾರಿಸಿದ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಬರೆದರು.

 

Related