ಸಿದ್ದರಾಮಯ್ಯ, ಬಿಎಸ್‌ವೈ ಗುಣಮುಖರಾಗಲಿ

ಸಿದ್ದರಾಮಯ್ಯ, ಬಿಎಸ್‌ವೈ ಗುಣಮುಖರಾಗಲಿ

ಗುಲ್ಬರ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುಲ್ಬರ್ಗ ಗಾಣಿಗಾಪುರದ ದತ್ತಾತ್ರೇಯ ಸ್ವಾಮಿ ದೇಗುಲಕ್ಕೆ ತೆರಳಿ ಮಂಗಳವಾರ ಬೆಳಗ್ಗೆ ಪೂಜೆ ಸಲ್ಲಿಸಿದರು.

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕೊರೊನಾ ಸೋಂಕು ತಗುಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಸಿಎಂ ಯಡಿಯೂರಪ್ಪ ಅವರು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವರು, ಹಾಲಿ ಶಾಸಕರಾದ ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ ಪಾಟೀಲ್, ಶಾಸಕರಾದ ಅಜೇಯ್ ಕುಮಾರ್ ಸಿಂಗ್, ಎಂ.ವೈ. ಪಾಟೀಲ್, ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ್ ಮತ್ತಿತರರು ಜೊತೆಯಲ್ಲಿದ್ದರು.

Related