ಕೆಪಿಸಿಸಿ ಸ್ಥಾನಕ್ಕೆ ಅಧ್ಯಕ್ಷ ಯಾರು?

ಕೆಪಿಸಿಸಿ ಸ್ಥಾನಕ್ಕೆ ಅಧ್ಯಕ್ಷ ಯಾರು?

ಬೆಂಗಳೂರು, ಫೆ. 10 : ಕೆಪಿಸಿಸಿ ಸ್ಥಾನಕ್ಕೆ ಡಿಕೆ ಶಿವಕುಮಾರ್, ಎಂಬಿ ಪಾಟೀಲ್ ಹೆಸರು ಕೇಳಿಬಂದಿತ್ತು. ಆದರೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಇದೀಗ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಮುಂಚೂಣಿಯಲ್ಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಪಕ್ಷದ ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಎಲ್ಲಾ ನಾಯಕರನ್ನು ಜೊತೆಯಲ್ಲಿ ಕೊಂಡೊಯ್ಯುವ ನಾಯಕನಿಗಾಗಿ ಪಕ್ಷ ಹುಡುಕಾಟ ನಡೆಸುತ್ತಿದೆ.
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಹಾಗೂ ಶಿವಸೇನಾ ನಡುವೆ ಒಮ್ಮತ ಮೂಡಿಸಿ ಮೈತ್ರಿ ಸರ್ಕಾರ ರಚಿಸುವಲ್ಲಿ ಪ್ರಮುಖ ಕಾರಣರಾದ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೆಲ ದಿನಗಳ ಕಾಲ ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಲು ಹೈಕಮಾಂಡ್ ಚಿಂತನೆ ನಡೆಸಿದೆ ಎಂಬುದು ತಿಳಿದುಬಂದಿದೆ. ಡಿಕೆ ಶಿ,ಪಾಟೀಲ್ ಅವರಿಗಿಂತ ಮಲ್ಲಿಕಾರ್ಜುನ ಖರ್ಗೆ ಹೆಚ್ಚಿನ ಅನುಭವ ಹೊಂದಿದ್ದಾರೆ. ಒಂದು ವೇಳೆ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದರೆ ಅವರ ವಿರುದ್ಧ ಸಿದ್ದರಾಮಯ್ಯ, ಎಂಬಿ ಪಾಟೀಲ್ ಕೂಡಾ ಧ್ವನಿ ಎತ್ತುವುದಿಲ್ಲ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.

Related