ಕುಮಾರಸ್ವಾಮಿಯವರೇ ದಾರಿ ತಪ್ಪಿದ ಮಗ: ಪ್ರಕಾಶ್ ರೈ

ಕುಮಾರಸ್ವಾಮಿಯವರೇ ದಾರಿ ತಪ್ಪಿದ ಮಗ: ಪ್ರಕಾಶ್ ರೈ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯದಲ್ಲಿರುವ ಹೆಣ್ಣು ಮಕ್ಕಳಿಗೆ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕೆ ರಾಜ್ಯದಲ್ಲಿ ಎಚ್‍ಡಿ ಕುಮಾರಸ್ವಾಮಿ ಅವರ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಇನ್ನು ಇದಕ್ಕೆ ಪ್ರತಿಕ್ರಿಯೆಸಿದ ನಟ ಪ್ರಕಾಶ್ ರಾಜ್ ಅವರು, ಕುಮಾರಸ್ವಾಮಿಯವರೇ ದಾರಿ ತಪ್ಪಿದ ಮಗ ಎಂದು ಹೇಳಿದ್ದಾರೆ. ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿ ಪದ ಬಳಸುವುದು ಅವರ ಬುದ್ಧಿಮಟ್ಟವನ್ನು ತೋರಿಸಿಕೊಡುತ್ತದೆ ಎಂದು ಕುಮಾರಸ್ವಾಮಿಯವರಿಗೆ ಟಾಂಗ್ ನೀಡಿದ್ದಾರೆ.

ನಗರದ ರೈತ ಸಭಾಂಗಣದಲ್ಲಿ ನಡೆದ ಶ್ರಮಿಕರ ಸ್ವಾಭಿಮಾನಿ ಗೆಲುವಿನ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಂಡ್ಯದ ಮಗ ಯಾರು, ಕಳ್ಳನನ್ನ ಮಗ ಯಾರು ಎಂಬುದನ್ನು ಲೋಕಸಭಾ ಚುನಾವಣೆಯಲ್ಲಿ ಮಂಡ್ಯದ ಜನರು ನಿರ್ಧರಿಸುತ್ತಾರೆ ಎಂದು ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು.

 

Related