ಕುಮಾರಸ್ವಾಮಿ ಭೇಟಿ ಮಾಡಿದ ಪ್ರತಾಪ್ ಸಿಂಹ

ಕುಮಾರಸ್ವಾಮಿ ಭೇಟಿ ಮಾಡಿದ ಪ್ರತಾಪ್ ಸಿಂಹ

ರಾಮನಗರ: ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಈ ಬಾರಿ ಲೋಕಸಭಾ ಚುನಾವಣೆಗೆ ಸಮರ ಸಾರಲು ಸಜ್ಜಾಗಿರುವುದು ನಮಗೆಲ್ಲರಿಗೂ ಗೊತ್ತಿರುವ ಸಂಗತಿ.

ಇನ್ನು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಬೆನ್ನಲ್ಲೇ ಇಂದು ಮೈಸೂರು ಮತ್ತು ಕೊಡಗು ಬಿಜೆಪಿಯ ಸಂಸದ ಪ್ರತಾಪ್ ಸಿಂಹ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಮಾಜಿ ಮುಖ್ಯಮಂತ್ರಿಯ ಕುಮಾರಸ್ವಾಮಿ ಅವರ ಬಿಡದಿ ಮನೆಯಲ್ಲಿ ಪ್ರತಾಪ್ ಸಿಂಹ ಭೇಟಿಯಾದರು. ಕೈಯಲ್ಲಿ ಬೋಕ್ಕೆ ಹಿಡಿದಿರುವ ಪ್ರತಾಪ್ ಸಿಂಹ ಹಿರಿಯ ನಾಯಕನ ಕಾಲು ಮುಟ್ಟಿ ನಮಸ್ಕರಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವುದರಿಂದ ಹಿಂದಿನ ವಿಷಯಗಳನ್ನು ಅವರು ಮರೆತು ಈಗ ಮುಂಬರುವ ಲೋಕಸಭಾ ಚುನಾವಣೆಗೆ ಒಗ್ಗಟ್ಟಿನಿಂದ ಕೆಲಸ ಮಾಡಲು ಭೇಟಿಯಾಗಿದ್ದಾರೆ ಎಂದು ತಿಳಿದುಬಂದಿದೆ

Related