ಬೆಂಗಳೂರು: ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯದ ಹಲವಾರು ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ.
ಕಾಶ್ಮೀರದಲ್ಲಿ ಉಗ್ರರು ದಾಳಿ ಮಾಡಲು ಕೇಂದ್ರದ ಗುಪ್ತಚಾರ ಇಲಾಖೆಯ ವೈಫಲ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗುಪ್ತಚಾರ ಇಲಾಖೆ ಮೇಲೆ ಆಕ್ರೋಶ ಅವರ ಹಾಕಿದ್ದಾರೆ.
ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಈ ಕುರಿತು ನಗರದಲ್ಲಿದ್ದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಮುಖ್ಯಮಂತ್ರಿಗಳು, ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬುವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದರು. ಇದನ್ನೂ ಓದಿ: ಉಗ್ರರ ದಾಳಿ ಪ್ರಪಂಚಕ್ಕೇ ದೊಡ್ಡ ಆಘಾತ: ಡಿಸಿಎಂ ಡಿಕೆಶಿ
ಕಾಶ್ಮೀರದ ಪಹಲ್ಗಾಮ್ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದರು.
