150 ವರ್ಷಗಳ ಇತಿಹಾಸವಿರುವ ಲಕ್ಷ್ಮಿ ವೆಂಕಟರಮಣ ಸ್ವಾಮಿ ರಥೋತ್ಸವ

150 ವರ್ಷಗಳ ಇತಿಹಾಸವಿರುವ ಲಕ್ಷ್ಮಿ ವೆಂಕಟರಮಣ ಸ್ವಾಮಿ ರಥೋತ್ಸವ

ಬೊಮ್ಮನಹಳ್ಳಿ: ಅಗರ ಲಕ್ಷ್ಮಿ ವೆಂಕಟರಮಣ ಸ್ವಾಮಿ ಬ್ರಹ್ಮ ರಥೋತ್ಸವಕ್ಕೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಹಾಗೂ ಶಾಸಕ ಎಂ. ಸತೀಶ್ ರೆಡ್ಡಿಯವರು ಚಾಲನೆ ನೀಡಿದರು.

150 ವರ್ಷಗಳ ಇತಿಹಾಸವಿರುವ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದ ಧರ್ಮಕರ್ತರಾದ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಶ್ರೀನಿವಾಸ ರೆಡ್ಡಿಯವರ ಕುಟುಂಬದ ಸದಸ್ಯರು ವಿಶೇಷ ಪೂಜೆಯನ್ನು ಸಲ್ಲಿಸಿ ರಥೋತ್ಸವಕ್ಕೆ ವಿಶೇಷ ಪೂಜೆ ಸಲ್ಲಿಸಿದರು.

ಸಾವಿರಾರು ಭಕ್ತರು ಈ ರಥೋತ್ಸವದಲ್ಲಿ ಭಾಗವಹಿಸಿ ಭಗವಂತನ ಕೃಪಾಕಟಾಕ್ಷಕ್ಕೆ ಪಾತ್ರರಾದರು. ಇದೇ ಸಂದರ್ಭದಲ್ಲಿ ಸಚಿವ ರಾಮಲಿಂಗಾರೆಡ್ಡಿ, ಕಾಂಗ್ರೆಸ್ ಲೋಕಸಭಾ ಸದಸ್ಯೆ ಸೌಮ್ಯಾರೆಡ್ಡಿ ಸೇರಿದಂತೆ ಅನೇಕ ಗಣ್ಯರು ರಥೋತ್ಸವದಲ್ಲಿ ದೇವರ ದರ್ಶನ ಪಡೆದರು.

ಅಗರ ಕಾಂಗ್ರೆಸ್ ಕಾರ್ಯಕರ್ತರು ಏರ್ಪಡಿಸಿರುವ ವಿಶೇಷ ಅನ್ನದಾನ ಕರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿಯವರು ಅನ್ನದಾಸೋಹ ಕರ್ಯಕ್ರಮಕ್ಕೆ ಚಾಲನೆ ನೀಡಿದರು. ಸುಮಾರು 5 ಸಾವಿರಕ್ಕೂ ಅಧಿಕ ಭಕ್ತರು, ವಿವಿಧ ಗ್ರಾಮಗಳಿಂದ ಬಂದಂತಹ ಭಕ್ತಾಧಿಗಳು ಪ್ರಸಾದವನ್ನು ಸೇವಿಸಿ, ದೇವರ ದರ್ಶನ ಪಡೆದರು.

ಈ ಕರ್ಯಕ್ರಮದಲ್ಲಿ ಮಾಜಿ ಮಹಾಪೌರರಾದ ಮಂಜುನಾಥ ರೆಡ್ಡಿ, ಕಾಂಗ್ರೆಸ್ ಮುಖಂಡರಾದ ರಾಮೋಜಿಗೌಡ, ಮಾಜಿ ನಗರಸಭಾ ಸದಸ್ಯ ಕೆ. ರಮೇಶ್, ಕಾಂಗ್ರೆಸ್ ಮುಖಂಡರಾದ ಚಿಕ್ಕಣ್ಣ, ವೆಂಕಟರಮಣಪ್ಪ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.

Related