ಡಿಜಿಟಲ್ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಡಿಜಿಟಲ್ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಬೆಂಗಳೂರು:  ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷವು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುತ್ತಿದ್ದು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜ್ಯೋತಿ ಬೆಳಗಿಸುವ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ರಾಹುಲ್ ಗಾಂಧಿ ಚಾಲನೆ ನೀಡಿದರು. ಡಿಜಿಟಲ್ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು.

ಈಗಾಗಲೇ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿರುವ ರಾಜ್ಯ ಸರ್ಕಾರ ಇಂದು ಗೃಹಲಕ್ಷಿ ಯೋಜನೆಯ 2,000 ರೂ. ಹಣವನ್ನು ಮಹಿಳೆಯರ ಖಾತೆಗೆ ವರ್ಗಾಯಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ.

ಕರ್ನಾಟಕ ಅಭಿವೃದ್ಧಿ ಮಾದರಿ ಆಡಳಿತಕ್ಕೆ 100 ದಿನಗಳು ತುಂಬಿರುವ ಈ ಹೊತ್ತಿನಲ್ಲಿ ನಾವು ನುಡಿದಂತೆ ನಡೆಯುತ್ತಿದ್ದೇವೆ. ನಿಮ್ಮ ಮನೆಬಾಗಿಲಿಗೆ ಇಂದಿನಿಂದ ನಮ್ಮ ಗೃಹಲಕ್ಷ್ಮಿ ಯೋಜನೆಯಡಿ 2,000 ರೂಪಾಯಿ ತಲುಪಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕಾರ್ಯಕ್ರಮದ ವೇದಿಕೆ ಮೇಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಸಚಿವರಾದ ಡಾ.ಜಿ.ಪರಮೇಶ್ವರ್, ಡಾ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಕೆ.ವೆಂಕಟೇಶ್, ಕೃಷ್ಣ ಭೈರೇಗೌಡ, ಚಲುವರಾಯಸ್ವಾಮಿ, ಕೆ.ಎನ್.ರಾಜಣ್ಣ ಉಪಸ್ಥಿತರಿದ್ದರು.

Related