ಜೆಡಿಎಸ್ ನ ನಾಯಕರು ಪ್ರಜ್ವಲ್ ನ ಪ್ಲಾನ್ ಮಾಡಿಯೇ ವಿದೇಶಕ್ಕೆ ಹಾರಿಸಿದ್ದಾರೆ: ಸಿಎಂ

ಜೆಡಿಎಸ್ ನ ನಾಯಕರು ಪ್ರಜ್ವಲ್ ನ ಪ್ಲಾನ್ ಮಾಡಿಯೇ ವಿದೇಶಕ್ಕೆ ಹಾರಿಸಿದ್ದಾರೆ: ಸಿಎಂ

ಯಾದಗಿರಿ: ಇಡೀ ರಾಜ್ಯದಾದ್ಯಂತ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ, ಹೋರಾಟ ನಡೆಯುತ್ತಿದ್ದು, ಇಂದಿನಿಂದ ಎಸ್ ಐ ಟಿ ಅಧಿಕಾರಿಗಳು ಹೊಳೆನರಸಾಪುರಕ್ಕೆ ತೆರಳಿ ಭರ್ಜರಿ ವಿಚಾರಣೆ ಕೈಗೊಂಡಿದ್ದಾರೆ.

ಇನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಪ್ರಜ್ವಲ್ ಅವರನ್ನು ಪ್ಲಾನ್ ಮಾಡಿಯೇ ವಿದೇಶಕ್ಕೆ ಕಳಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

ಸುರಪುರ ತಾಲೂಕಿನ ದೇವತ್ಕಲ್​ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರನ್ನು ಪ್ಲಾನ್ ಮಾಡಿಯೇ ಜೆಡಿಎಸ್ ನ ನಾಯಕರುಗಳು ವಿದೇಶಕ್ಕೆ ಹಾರಿಸಿದ್ದಾರೆ. ಈಗ ನೋಡಿದರೆ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ದೇಶಕ್ಕೆ ಹೋಗುವವರಿಗೆ ವೀಸಾ ಕೊಡುವವರು ಯಾರು ಹೇಳಿ? ಅವರು ಕೂಡ ಬಿಜೆಪಿಯವರೇ ಎಂದು ವಾಗ್ದಾಳಿ ನಡೆಸಿದ್ದಾರೆ. ಇನ್ನು ಪ್ರಜ್ವಲ್ ಪ್ರಕರಣಕ್ಕೂ ಡಿಸಿಎಂ ಡಿಕೆ ಶಿವಕುಮಾರ್​ಗೂ ಯಾವುದೇ ಸಂಬಂಧ ಇಲ್ಲ ಎಂದರು.

ಸೂರಜ್ ರೇವಣ್ಣ ಜೊತೆ ಫೋಟೋ ಇದ್ದರೆ ಏನಾಗುತ್ತೆ ಕುಮಾರಸ್ವಾಮಿ ಜೊತೆಗೂ ಡಿಕೆ ಶಿವಕುಮಾರ್ ಫೋಟೋ ಇದೆ. ನನ್ನ ಜೊತೆಗೆ ಹೆಚ್​ಡಿ ರೇವಣ್ಣ ಇರುವ ಫೋಟೋ ಕೂಡ ಇದೆ. ಹಾಗಾದ್ರೆ ಅವರನ್ನು ರಕ್ಷಣೆ ಮಾಡುತ್ತೇನೆ ಎಂದು ಅರ್ಥವಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ನರೇಂದ್ರ ಮೋದಿನ ತೆಗೆದುಕೊಂಡು ನೆಕ್ಕುತ್ತೀರಾ?: ರಾಜು ಕಾಗೆ

ಪೆನ್​ಡ್ರೈವ್ ಹಿಂದೆ ಡಿಕೆ ಶಿವಕುಮಾರ್ ಕೈವಾಡ ಇದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕಾರ್ತಿಕ್ ಎಂಬಾತ ಪ್ರಜ್ವಲ್ ರೇವಣ್ಣರ ಕಾರು ಚಾಲಕ ಆಗಿದ್ದ. ಕಾರ್ತಿಕ್ ಬಿಜೆಪಿ ಮುಖಂಡನ ಕೈಯಲ್ಲಿ ಪೆನ್​ಡ್ರೈವ್ ಕೊಟ್ಟಿದ್ದ. ಅದನ್ನು ಆತನೇ ಹೇಳಿಕೊಂಡಿದ್ದಾನೆ. ಹೆಚ್​​ಡಿಕೆ ಕೇವಲ ರಾಜಕಾರಣಕ್ಕಾಗಿ ಡಿಕೆ ಶಿವಕುಮಾರ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದರು.

 

Related