ಮತ ಚಲಾಯಿಸಿ ಪ್ರಜಾಪ್ರಭುತ್ವವನ್ನು ಗೆಲ್ಲಿಸೋಣ: ತುಷಾರ್ ಗಿರಿ ನಾಥ್

ಮತ ಚಲಾಯಿಸಿ ಪ್ರಜಾಪ್ರಭುತ್ವವನ್ನು ಗೆಲ್ಲಿಸೋಣ: ತುಷಾರ್ ಗಿರಿ ನಾಥ್

ಬೆಂಗಳೂರು: ಈ ಬಾರಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ಯುವ ಮತದಾರರು ಎಲ್ಲರೂ ಒಟ್ಟಾಗಿ ಮತ ಚಲಾಯಿಸಬೇಕು. ಮತ ಚಲಾಯಿಸಿ ಪ್ರಜುಪ್ರಭುತ್ವವನ್ನು ಗೆಲ್ಲಿಸೋಣವೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಎಲ್ಲಾ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು.

ಲೋಕಸಭಾ ಚುನಾವಣೆ ಹಿನ್ನೆಲೆ ಲಾಲ್‌ಬಾಗ್ 1ನೇ ಮುಖ್ಯದ್ವಾರದಿಂದ ಹಮ್ಮಿಕೊಂಡಿದ್ದ “ಮತದಾನ ಜಾಗೃತಿ ಕಾಲ್ನಡಿಗೆ ಜಾಥಾ” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ನೀವೆಲ್ಲರೂ ಯುವ ಮತದಾರರಾಗಿದ್ದು, ಮೊದಲ ಬಾರಿ ಮತ ಚಲಾಯಿಸುತ್ತಿದ್ದೀರಿ. ಪ್ರಜಾಪ್ರಭುತ್ವಕ್ಕೆ ಉತ್ತಮ ಕೊಡುಗೆ ನೀಡುವ ನಿಟ್ಟಿನಲ್ಲಿ ಎಲ್ಲಾ ಯುವ ಮತದಾರರು ತಪ್ಪದೆ ಮತ ಚಲಾಯಿಸಬೇಕೆಂದು ಮನವಿ ಮಾಡಿದರು.

ಬೆಂಗಳೂರಿನಲ್ಲಿ ಕಳೆದ ಚುನಾವಣೆಯಲ್ಲಿ ಶೇ. 54 ರಷ್ಟು ಮತದಾನವಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಮತದಾನದ ಶೇಖಡವಾರು ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಾನಾ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಈ ವೇಳೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಕಾಂತರಾಜು, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಯಾದ ಪ್ರತಿಭಾ ಸೇರಿದಂತೆ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

Related