ಪ.ಪಂ ಸದಸ್ಯರ ಸದಸ್ಯತ್ವ ರದ್ದುಗೊಳಿಸುವಂತೆ ಪತ್ರ : ರಾಜಕುಮಾರ್ ಹಲ್ಬರ್ಗ

ಪ.ಪಂ ಸದಸ್ಯರ ಸದಸ್ಯತ್ವ ರದ್ದುಗೊಳಿಸುವಂತೆ ಪತ್ರ : ರಾಜಕುಮಾರ್ ಹಲ್ಬರ್ಗ

ಔರಾದ: ತಾಲೂಕಿನಲ್ಲಿ ಕಾಂಗ್ರೆಸ್‌ನ ಕೆಲವರು ಬಿಟ್ಟು ಹೋಗುವುದರಿಂದ ಪಕ್ಷಕ್ಕೆ ಯಾವುದೇ ಹಾನಿ ಆಗುವುದಿಲ್ಲ, ಇನ್ನು ಬಲಿಷ್ಠ ಗೊಂಡಿದೆ ಎಂದು ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ್ ಹಲ್ಬರ್ಗ ಅವರು ಹೇಳಿದರು.
ಸೋಮವಾರ ತಾಲ್ಲೂಕಿನ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ, ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡರು ಪ.ಪಂ ಸದಸ್ಯರ ವಿರುದ್ಧ ಆಕ್ರೋಶ ಹೊರ ಹಾಕಿದರು. ಪ.ಪಂ ಸದಸ್ಯರಾಗಿ ಆಯ್ಕೆಗೊಂಡು ಇಂದು ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ. ಪ.ಪಂ ಸದಸ್ಯರ ಸದಸ್ಯತ್ವ ರದ್ದುಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗುವುದು ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಸುಮಾರು ಜನ ಬಿಜೆಪಿಯಿಂದ ಸೇರ್ಪಡೆಗೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ. ಮುಂಬರುವ ದಿನಗಳಲ್ಲಿ ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಲಾಗುವುದು. ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡಿದರೆ ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಾಲೂಕ ಅಧ್ಯಕರಾದ ಆನಂದ್ ಚವಾಣ, ಕೆಪಿಸಿಸಿ ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷರಾದ ಸುಧಾಕರ್ ಕೊಳ್ಳುರ್ . ಕೆಪಿಸಿಸಿ ತಾಲೂಕು ಕಾಂಗ್ರೆಸ್ ವಕ್ತಾರರಾದ ಸಾಯಿ ಕುಮಾರ್ ಘೋಡ್ಕೆ ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳಾದ ಶರಣಪ್ಪ ಪಾಟೀಲ್, ಶಂಕರ ಪಾಟೀಲ, ಅವರು ಉಪಸ್ಥಿತರಿದ್ದರು.

Related