ರಾಜ್ಯದ 48 ಕಡೆ ಲೋಕಾಯುಕ್ತ ದಾಳಿ

ರಾಜ್ಯದ 48 ಕಡೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ 48 ಕಡೆ ದಾಳಿ ಮಾಡಿದ್ದಾರೆ. ಸುಖನಿದ್ರೆಯಲ್ಲಿ ಜಾರಿದ್ದ ಸರಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಬಿಕ್ಷಾ ಕೊಟ್ಟಿರುವುದರಿಂದ ಸರ್ಕಾರಿ ಅಧಿಕಾರಿಗಳು ಹೈರಾಣಗೊಂಡಿದ್ದಾರೆ.

ಹೌದು, ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮುಂಜಾನೆಯ ಸುಖ ನಿದ್ರೆಯಲ್ಲಿದ್ದ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಹಿನ್ನೆಲೆ ಬೆಂಗಳೂರು, ಕೊಡಗು, ಚಿತ್ರದುರ್ಗ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಗಳು ದಾಳಿ ನಡೆಸಿದ್ದಾರೆ.

ಮಹದೇವಪುರ ವಲಯದ ಬಿಬಿಎಂಪಿ RI ನಟರಾಜ್ ಮನೆ ಮೇಲೆ ದಾಳಿ. ಅಧಿಕಾರಿ ನಟರಾಜು ಮನೆಮೇಲೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಶಿವನಹಳ್ಳಿ ಗ್ರಾಮದಲ್ಲಿರುವ ನಟರಾಜು ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಹಣ ಪಡೆಯುವಾಗ ನಟರಾಜ್ ಟ್ರಾಪ್ ಆಗಿದ್ದರು. ಬೆಂಗಳೂರು ಒಂದರಲ್ಲೇ ಹತ್ತಕ್ಕೂ ಹೆಚ್ಚುಕಡೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಹಲವು ಕಡತಗಳನ್ನು ಪರಿಶೀಲಿಸುತ್ತಿದ್ದಾರೆ.

ಚಿತ್ರದುರ್ಗದ ಹೊಳಲ್ಕೆರೆ ಸಣ್ಣ ನೀರಾವರಿ‌ ಇಲಾಖೆ ಇಂಜಿನಿಯರ್ ಕೆ.ಮಹೇಶ್, ಪತ್ನಿ ಬಿಬಿಎಂಪಿ ಎಇ ಹೆಚ್.ಭಾರತಿ ಮನೆ ಮೇಲೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದಾವಣಗೆರೆಯ ಜಯನಗರದಲ್ಲಿರುವ ಮಹೇಶ್​​ ಮನೆ ಮೇಲೂ ದಾಳಿ ನಡೆಸಿ, ಪರಿಶೀಲಿಸುತ್ತಿದ್ದಾರೆ. ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಸಂಪಾದನೆ ದೂರು ಹಿನ್ನೆಲೆ ಲೋಕಾಯುಕ್ತ ದಾಳಿ ಮಾಡಲಾಗಿದೆ.

 

Related