ಬೆಂಗಳೂರು: ರಾಜ್ಯದಾದ್ಯಂತ ಇಂದು ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಹೌದು, ಸುಖ ನಿದ್ರೆಯಲ್ಲಿ ಜಾರಿದ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಧೀಡಿರ್ ದಾರಿ ಮಾಡಿದ್ದು ಭ್ರಷ್ಟ ಅಧಿಕಾರಿಗಳ ಎದೆಯಲಿ ಧವಡವ ಶುರುವಾಗಿದೆ. ಇದನ್ನೂ ಓದಿ: ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆಗಳು
ಇನ್ನು ರಾಜಧಾನಿ ಬೆಂಗಳೂರಿನಲ್ಲಿ 12 ಕಡೆ ಲೋಕಾಯುಕ್ತ ದಾಳಿ ಮಾಡಿದೆ. ತುಮಕೂರಿನಲ್ಲಿ 7, ಬೆಂಗಳೂರು ಗ್ರಾಮಾಂತರ 8, ಯಾದಗಿರಿ 5, ಮಂಗಳೂರು 4, ವಿಜಯಪುರದಲ್ಲಿ 4 ಕಡೆಗಳಲ್ಲಿ ಲೋಕಾಯುಕ್ತ ದಾಳಿ ಮಾಡಿ ಪರಿಶೀಲನೆ ನಡೆಸಿದೆ.
