ಪ್ರಜ್ವಲ್ ರೇವಣ್ಣಗೆ ಲುಕ್ಔಟ್ ನೊಟೀಸ್ ಜಾರಿ

ಪ್ರಜ್ವಲ್ ರೇವಣ್ಣಗೆ ಲುಕ್ಔಟ್ ನೊಟೀಸ್ ಜಾರಿ

ಬೆಂಗಳೂರು: ಕಳೆದ ನಾಲ್ಕೈದು ದಿನಗಳಿಂದ ಕರ್ನಾಟಕ ರಾಜ್ಯದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಂತ್ರಸ್ತೆ ಪ್ರಜ್ವಲ್ ರೇವಣ್ಣ ಅವರ ಮೇಲೆ ದೂರು ದಾಖಲಿಸಿದ್ದು, ರಾಜ್ಯ ಸರ್ಕಾರ ಪ್ರಜ್ವಲ್ ರೇವಣ್ಣ ಅವರ ಪ್ರಕರಣವನ್ನು ಎಸ್ಐಟಿಗೆ ನೀಡಿದೆ. ಇನ್ನು ಎಸ್ಐಟಿ ಅಧಿಕಾರಿಗಳು ಚುರುಕಿನ ಕಾರ್ಯಾಚರಣೆ ನಡೆಸುತ್ತಿದ್ದು, ಪ್ರಜ್ವಲ್ ರೇವಣ್ಣ ಅವರಿಗೆ ಲುಕ್ ನೋಟಿಸ್ ಜಾರಿ ಮಾಡಿದೆ.

ಹೌದು, ಅಶ್ಲೀಲ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಎಸ್ಐಟಿ ಅಧಿಕಾರಿಗಳು ಲುಕ್ ನೋಟಿಸ್ ಜಾರಿ ಮಾಡಿದೆ.

ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ತಲೆ ನಡೆಸಿಕೊಂಡಿದ್ದಾರೆ,  ಈಗಾಗಲೇ ಪ್ರಜ್ವಲ್ ರೇವಣ್ಣನವರಿಗೆ ತನಿಖೆಗೆ ಸಂಬದಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರೂ ಕೂಡ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಅವರ ಹುಡುಕಾಟಕ್ಕೆ ಎಂದು ದೇಶ ಮತ್ತು ವಿದೇಶ ವಿಮಾನ ನಿಲ್ದಾಣಗಳಿಗೆ ಲುಕ್ ನೋಟಿಸ್ ನೀಡಲಾಗಿದೆ ಎಂಬ ಮಾಹಿತಿ ಹೊರಬಂದಿದೆ.

ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ‌ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಹಾಗೂ ಅವರ ಮಗ ಪ್ರಜ್ವಲ್ ಆರೋಪಿಗಳಾಗಿದ್ದಾರೆ. ಪ್ರಕರಣ ದಾಖಲಾಗುವ‌ ಮುನ್ನವೇ ಪ್ರಜ್ವಲ್‌ ದೇಶದಿಂದ‌ ಪರಾರಿಯಾಗಿದ್ದಾರೆ. ವಿಚಾರಣೆಗೆ ನೋಟಿಸ್ ನೀಡಿದರೂ ಹಾಜರಾಗಿಲ್ಲ.

ಪ್ರಜ್ವಲ್ ವಿದೇಶದಲ್ಲಿರುವ ಬಗ್ಗೆ ಎಸ್ಐಟಿ ಅಧಿಕಾರಿಗಳು ಮಾಹಿತಿ ಕಲೆ‌ ಹಾಕಿದ್ದಾರೆ. ಪ್ರಜ್ವಲ್ ಪತ್ತೆಗಾಗಿ‌ ಲುಕ್ ಔಟ್ ನೋಟಿಸ್ ಜಾರಿ‌ ಮಾಡಿ, ವಿಮಾನ ನಿಲ್ದಾಣ ಅಧಿಕಾರಿಗಳು ಹಾಗೂ ಅಂತರರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ರವಾನಿಸಿದ್ದಾರೆ. ಎಸ್ಐಟಿ ನೀಡಿದ ಲುಕ್‌ಔಟ್ ನೋಟಿಸ್ ಬಳಿಕವೂ ಪ್ರಜ್ವಲ್‌ ರೇವಣ್ಣ ಪತ್ತೆಯಾಗದಿದ್ದರೆ, ಅವರ ಪತ್ತೆಗೆ ಕೋರ್ಟ್‌ನಿಂದ ಜಾಮೀನು ರಹಿತ ವಾರೆಂಟ್ ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Related