Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಾ. 3ರಿಂದ ಅಧಿವೇಶನ; ಮಾ. 7 ರಂದು ಆಯವ್ಯಯ ಮಂಡನೆ: ಸಿಎಂ
  • Bangalore
  • Front news
  • Politics
  • State

ಮಾ. 3ರಿಂದ ಅಧಿವೇಶನ; ಮಾ. 7 ರಂದು ಆಯವ್ಯಯ ಮಂಡನೆ: ಸಿಎಂ

admin February 17, 2025 1 minute read
Spread the love

ಬೆಂಗಳೂರು: ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದ್ದು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.  ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಯವ್ಯಯದ ಮೇಲೆ ಚರ್ಚೆ ನಡೆದು ಉತ್ತರವನ್ನು ಮಾರ್ಚ್ ತಿಂಗಳ ಕೊನೆಯಲ್ಲಿ ನೀಡಲಾಗುವುದು. ಅಧಿವೇಶನ ಎಷ್ಟು ದಿನದವರೆಗೆ ನಡೆಸಬೇಕೆಂದು ವ್ಯವಹಾರ ಸಲಹಾ ಸಮಿತಿಯಲ್ಲಿ ತೀರ್ಮಾನ ಮಾಡಲಾಗುವುದು ಎಂದರು. ಇದನ್ನೂ ಓದಿ: ಶುದ್ದ ಕುಡಿಯುವ ನೀರಿನ ಘಟಕಗಳ ಸಮೀಕ್ಷೆ ನಡೆಸಿ ವರದಿ ಕೊಡಿ: ತುಷಾರ್ ಗಿರಿ ನಾಥ್

ಸರ್ಕಾರ ರೈತರ ಹಿತವನ್ನು ಕಾಪಾಡುವುದರಲ್ಲಿ ಹಿಂದೆ ಬಿದ್ದಿಲ್ಲ

ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಇಂದು ರೈತ ಸಂಘಟನೆಯ ಮುಖಂಡರೊಂದಿಗೆ ಸಭೆ ನಡೆಸಿದ್ದು, ಅವರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ತಯಾರಿಸುವಾಗ ಇತಿಮಿತಿಯೊಳಗೆ ಸಲಹೆಗಳನ್ನು ಸೇರ್ಪಡೆ ಮಾಡಲಾಗುವುದು. ಕರ್ನಾಟಕ ಸರ್ಕಾರ ರೈತರ ಹಿತವನ್ನು ಕಾಪಾಡುವುದರಲ್ಲಿ ಹಿಂದೆ ಬಿದ್ದಿಲ್ಲ. ಯಾವತ್ತೂ ರೈತರ ಪರವಾಗಿದ್ದು, ಕೃಷಿ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿ ಇರಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬೆಲೆಯೇರಿಕೆ ತಗ್ಗಿಸಲು ಪ್ರಯತ್ನ

ಬೆಲೆಯೇರಿಕೆ ಹೆಚ್ಚಾಗಿರುವುದರಿಂದ ನಿರೀಕ್ಷೆಗಳು ಕೂಡ ಹೆಚ್ಚಾಗಿವೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎರಡೂ ಮಾಡುತ್ತವೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ ಕುರಿತು ಹೆಚ್ಚಿನ ಒತ್ತು ನೀಡಬೇಕು. ರಾಜ್ಯ ಸರ್ಕಾರ ಬೆಲೆಯೇರಿಕೆ ತಗ್ಗಿಸಲು ಸಾಧ್ಯವಾದಷ್ಟೂ ಪ್ರಯತ್ನ ಮಾಡಲಿದೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಶುದ್ದ ಕುಡಿಯುವ ನೀರಿನ ಘಟಕಗಳ ಸಮೀಕ್ಷೆ ನಡೆಸಿ ವರದಿ ಕೊಡಿ: ತುಷಾರ್ ಗಿರಿ ನಾಥ್
Next: ನೀರಾವರಿ ಸಚಿವರುಗಳ ಸಭೆ

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.