ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ ಅವರು ಭ್ರಮೆಯಲ್ಲಿದ್ದಾರೆ: ಸಿದ್ದರಾಮಯ್ಯ

ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ ಅವರು ಭ್ರಮೆಯಲ್ಲಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕ ಸರ್ಕಾರ ಬೀಳಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ಹೇಳಿದರು. ಈ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆಸಿದ್ದು, ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ ಅವರು ಭ್ರಮೆಯಲ್ಲಿದ್ದಾರೆ. ಕರ್ನಾಟಕ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಯಾರಿಂದಲೂ ಬೀಳಿಸಲು ಸಾಧ್ಯವಿಲ್ಲವೆಂದು ಮಹಾರಾಷ್ಟ್ರದ ಸಿಎಂಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗಿತು ನೀಡಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಏಕನಾಥ್​ ಶಿಂಧೆ ಭ್ರಮೆಯಲ್ಲಿದ್ದಾರೆ. ಯಾವ ಕಾರಣಕ್ಕೂ ಅಪರೇಷನ್ ಕಮಲ ಮಾಡಲು ಆಗುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಆದಂತೆ ಕರ್ನಾಟಕದಲ್ಲಿ ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿಯೂ ‘ಇಂಡಿಯಾ’ ಮೈತ್ರಿಕೂಟ ಗೆಲ್ಲುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣಕ್ಕೆ ಮೆಘಾಟ್ವಿಸ್ಟ್..!

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾವು 20 ಸ್ಥಾನ ಗೆಲ್ಲುತ್ತೇವೆ. ಅವರು ಚುನಾವಣೆಯಲ್ಲಿ ಸೋಲುತ್ತಾರೆ. ಅದಕ್ಕೆ ಅವರು ಹತಾಶತಾಗಿ ಸರ್ಕಾರ ಬೀಳಿಸುವ ಹೇಳಿಕೆ ನೀಡುತ್ತಿದ್ದಾರೆ ಎಂದು ಸಿಎಂ ಹೇಳಿದರು.

 

Related