Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ತ್ವರಿತವಾಗಿ ರಸ್ತೆ ನಿರ್ಮಾಣಕ್ಕೆ ಅಧಿಕಾರಿಗಳಿಗೆ ಸೂಚಿಸಿದ ಮಹೇಶ್ವರ್ ರಾವ್
  • Bangalore
  • State

ತ್ವರಿತವಾಗಿ ರಸ್ತೆ ನಿರ್ಮಾಣಕ್ಕೆ ಅಧಿಕಾರಿಗಳಿಗೆ ಸೂಚಿಸಿದ ಮಹೇಶ್ವರ್ ರಾವ್

admin August 19, 2025 1 minute read
WhatsApp Image 2025-08-19 at 17.48.07
Spread the love

ಬೆಂಗಳೂರು: ಯಲಹಂಕ ವಲಯ ಜಕ್ಕೂರು ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಯವರೆಗೆ ರಾಜಕಾಲುವೆ ಬಫರ್ ವಲಯದಲ್ಲಿ ತ್ವರಿತವಾಗಿ ರಸ್ತೆ ನಿರ್ಮಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯಲಹಂಕ ವಲಯ ವ್ಯಾಪ್ತಿಯಲ್ಲಿ ವಿವಿಧ ಸ್ಥಳಗಳಿಗೆ ಇಂದು (ಮಂಗಳವಾರ ಆ.19) ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಯಲಹಂಕ ವಲಯದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾದು ಹೋಗಲಿದ್ದು, ಅದಕ್ಕೆ ಸಂಪರ್ಕ ಕಲ್ಪಿಸುವ ಪರ್ಯಾಯ ರಸ್ತೆಗಳನ್ನು ನಿರ್ಮಿಸುವ ಸಲುವಾಗಿ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಜಕ್ಕೂರು ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಯವರೆಗೆ ಇರುವ ರಾಜಕಾಲುವೆಯ ಬಫರ್ ವಲಯದಲ್ಲಿ ರಸ್ತೆ ಮಾಡುವ ಯೋಜನೆಯಿದ್ದು, ಅದನ್ನು ತ್ವರಿತವಾಗಿ ಪ್ರಾರಂಭಿಸಿ ರಸ್ತೆ ನಿರ್ಮಾಣ ಮಾಡಬೇಕು.  ಇನ್ನು ಯಲಹಂಕ ಕೋಗಿಲು ಜಂಕ್ಷನ್ ನಿಂದ ಜಕ್ಕೂರು ಕೆರೆಯವರೆಗೆ ಹೊಸದಾಗಿ ಸುಮಾರು 15 ಮೀಟರ್ ಅಗಲದ ರಾಜಕಾಲುವೆ ಹಾಗೂ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ.  ಅದಕ್ಕೆ ಜಕ್ಕೂರು ರಸ್ತೆಯಿಂದ ಜಲಮಂಡಳಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ (ಎಸ್.ಟಿ.ಪಿ) ಮುಖಾಂತರ ಸಂಪರ್ಕ ಕಲ್ಪಿಸುವ ಸಲುವಾಗಿ ಪರಿಶೀಲಿಸಿ ಕ್ರಮವಹಿಸಲು ಸೂಚಿಸಿದರು. ಇದನ್ನೂ ಓದಿ: ಫೋಟೋಗ್ರಫಿ ಪತ್ರಿಕೋದ್ಯಮದ ಅವಿಭಾಜ್ಯ ಅಂಗ: ಕೆ.ವಿ.ಪ್ರ

ಜಕ್ಕೂರು ಬಳಿ ಜಿ.ವಿ.ಕೆ ಗ್ರೂಪ್ ನಿಂದ ಹೋಟೆಲ್ ನಿರ್ಮಾಣ ಮಾಡುತ್ತಿದ್ದು, ಜಕ್ಕೂರು ರಸ್ತೆಯಿಂದ ಹೋಟೆಲ್ ನಿರ್ಮಾಣ ಸ್ಥಳದ ಮೂಲಕ ರಾಷ್ಟ್ರೀಯ ಹೆದ್ದಾರಿಗೆ ರಸ್ತೆ ಸಂಪರ್ಕ ಕಲ್ಪಿಸಲು ಸಾಧ್ಯವೇ ಎಂಬುದರ ಕುರಿತು ಸಾಧಕ-ಬಾಧಕಗಳನ್ನು ಚರ್ಚಿಸಿ ವರದಿ ನೀಡಲು ಸೂಚಿಸಲಾಯಿತು.

ರೈತರ ಸಂತೆ ಬಳಿ ಹಳೆಯ ಕಲ್ಯಾಣಿಯಿದ್ದು, ಅದನ್ನು ಪುನರುಜ್ಜೀವನಗೊಳಿಸಿ ಅದಕ್ಕೆ ನೀರನ್ನು ತುಂಬಿಸಲು ಕ್ರಮವಹಿಸಬೇಕು.  ಇನ್ನು ರಸ್ತೆ ಬದಿ ತಾಜ್ಯ ಬಿಸಾಡಿರುವುದನ್ನು ತೆರವುಗೊಳಿಸಿ ಮತ್ತೆ ಕಸ ಬೀಳದಂತೆ ಕ್ರಮವಹಿಸಬೇಕು.   ಜಕ್ಕೂರು ಕೆರೆ ಅಂಗಳದಲ್ಲಿ ವಾಯು ವಿಹಾರ ಮಾರ್ಗವನ್ನು ಸರಿಯಾಗಿ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

 

About the Author

admin

Administrator

Visit Website View All Posts

Spread the love

Post navigation

Previous: ಫೋಟೋಗ್ರಫಿ ಪತ್ರಿಕೋದ್ಯಮದ ಅವಿಭಾಜ್ಯ ಅಂಗ: ಕೆ.ವಿ.ಪ್ರ
Next: 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.