ಮಂಡ್ಯ; ಹೆಣ್ಣು ಭ್ರೂಣ ಹತ್ಯೆ, ಬೆಂಗಳೂರು ಪೊಲೀಸ್​ ಕಮಿಷನರ್​ ಹೇಳಿದ್ದೇನು?

ಮಂಡ್ಯ; ಹೆಣ್ಣು ಭ್ರೂಣ ಹತ್ಯೆ, ಬೆಂಗಳೂರು ಪೊಲೀಸ್​ ಕಮಿಷನರ್​ ಹೇಳಿದ್ದೇನು?

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಮಂಡ್ಯ ತಾಲೂಕಿನ ಹುಲ್ಲೇನಹಳ್ಳಿ ಹಡೆದಲ್ಲಿ ಆಲೆಮನೆಯಲ್ಲಿ ಲಿಂಗಪತ್ತೆ ಮತ್ತು ಬ್ರೂಣ ಹತ್ಯೆಯನ್ನು ಮಾಡುವ ಚಟುವಟಿಕೆಯನ್ನು ಬೆಂಗಳೂರು ನಗರದ ಬೈಯಪ್ಪನಹಳ್ಳಿ ಪೊಲೀಸ್ ಅಧಿಕಾರಿಗಳು ಭ್ರೂಣ ಹತ್ಯೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲವನ್ನು ಬೈಯ್ಯಪ್ಪನಹಳ್ಳಿ ಪೊಲೀಸರು ಭೇದಿಸಿದ್ದಾರೆ. ಅಕ್ಟೋಬರ್​​ 15ರಂದು ಅನುಮಾನದ ಮೇಲೆ ಪೊಲೀಸರು ವಾಹನ ತಪಾಸಣೆ ಮಾಡಿದ್ದರು. ಬಳಿಕ ವಾಹನ ಚೇಸ್ ಮಾಡಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹೆಣ್ಣು ಮಗು ಎಂದು ಆರೋಪಿಗಳು ಭ್ರೂಣ ಹತ್ಯೆ ಮಾಡಿದ್ದಾರೆ. ಪ್ರಕರಣ ಸಂಬಂಧ ಇಬ್ಬರು ವೈದ್ಯರು, ಮೂವರು ಲ್ಯಾಬ್​ ಟೆಕ್ನಿಷಿಯನ್ ಸೇರಿದಂತೆ 9 ಜನರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ​ದಯಾನಂದ್​ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ 3 ತಿಂಗಳ ಅವಧಿಯಲ್ಲಿ ಆರೋಪಿಗಳು 342 ಭ್ರೂಣ ಹತ್ಯೆ ಮಾಡಿದ್ದಾರೆ. ಒಂದು ಕೃತ್ಯವೆಸಗಲು 20 ಸಾವಿರದಿಂದ 25 ಸಾವಿರ ಪಡೆಯುತ್ತಿದ್ದರು. ಬಂಧಿತ ವೀರೇಶ್​, ಸಿದ್ದೇಶ್​ ಈ ಹಿಂದೆ ಕಿಡ್ನ್ಯಾಪ್ ಕೇಸ್​ನಲ್ಲಿ ಭಾಗಿಯಾಗಿದ್ದರು ಎಂದು ತಿಳಿಸಿದರು.

 

Related