ಲೋಕಸಭಾ ಚುನಾವಣೆಗೆ ಮಾಸ್ಟರ್ ಟ್ರೈನರ್ ಗಳನ್ನು ನಿಯೋಜಿಸಲಾಗಿದೆ: ತುಷಾರ್ ಗಿರಿ ನಾಥ್

ಲೋಕಸಭಾ ಚುನಾವಣೆಗೆ ಮಾಸ್ಟರ್ ಟ್ರೈನರ್ ಗಳನ್ನು ನಿಯೋಜಿಸಲಾಗಿದೆ: ತುಷಾರ್ ಗಿರಿ ನಾಥ್

ಬೆಂಗಳೂರು: ಲೋಕಸಭಾ ಚುನಾವಣೆಗೆಂದು ಕರ್ನಾಟಕ ರಾಜ್ಯದಲ್ಲಿ ಎಲ್ಲಾ ರೀತಿಯ ಭರ್ಜರಿ ಸಿದ್ಧತೆಗಳು ನಡೆಯುತ್ತಿದ್ದು, ಮೊದಲನೇ ಹಂತದ ಚುನಾವಣೆ ಇದೆ ಏಪ್ರಿಲ್ 26ನೇ ತಾರೀಕಿನಂದು ನಡೆಯಲಿದ್ದು, ಈ ಚುನಾವಣೆಗೆ ಯಾವ ರೀತಿಯ ತಯಾರಿ ನಡೆಯಬೇಕೆಂದು ತರಬೇತಿ ನೀಡಲಾಗುತ್ತಿದೆ.

ಲೋಕಸಭಾ ಚುನಾವಣೆ ಸಂಬಂಧ ಮತಗಟ್ಟೆ ಅಧಿಕಾರಿಗಳಿಗೆ ನಾಳೆ(ಭಾನುವಾರ) ಮೊದಲ ತರಬೇತಿಯಿದ್ದು, ತರಬೇತಿ ಹಮ್ಮಿಕೊಂಡಿರುವ ಸ್ಥಳಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಂಡಿರಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಲೋಕಸಭಾ ಚುನಾವಣೆ ಹಿನ್ನೆಲೆ ಇಂದು ಪಾಲಿಕೆ ಕೇಂದ್ರ ಕಛೇರಿ ಆಯುಕ್ತರ ಕಛೇರಿಯಲ್ಲಿ ಅಧಿಕಾರಿಗಳ ಜೊತೆ ವೀಡಿಯೋ ಸಂವಾದ(VC)ದ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಳೆ ನಡೆಯುವ ತರಬೇತಿಗೆ ಈಗಾಗಲೇ ಮಾಸ್ಟರ್ ಟ್ರೈನರ್ ಗಳನ್ನು ನಿಯೋಜಿಸಲಾಗಿದೆ. ಎಲ್ಲಾ ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳು ತಪ್ಪದೆ ತರಬೇತಿಗೆ ಹಾಜರಾಗಬೇಕಾಗಿದ್ದು, ಗೈರು ಹಾಜರಾದ ಅಧಿಕಾರಿ/ಸಿಬ್ಬಂದಿಗಳ ಮೇಲೆ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಕಲಂ 134ರಂತೆ ಶಿಸ್ತು ಕ್ರಮ ಜರುಗಿಸಲಾಗುವುದೆಂದು ಸೂಚಿಸಿದರು.

ತರಬೇತಿ ನೀಡುವ ಸ್ಥಳಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ಊಟದ ವ್ಯವಸ್ಥೆ, ಕೈಪಿಡಿ, ಸೂಚನಾ ಫಲಕಗಳು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳು ಸರಿಯಾಗಿರುವಂತೆ ನೋಡಿಕೊಳ್ಳಬೇಕು. ಈ ಪೈಕಿ ಆಯಾ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಗಳು ತರಬೇತಿ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ಸೂಚಿಸಿದರು.

ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ ರವರು ಮಾತನಾಡಿ, ಲೋಕಸಭಾ ಚುನಾವಣೆಗೆ ಈಗಾಗಲೇ  ಪಿಆರ್‌ಒ ಹಾಗೂ ಎಪಿಆರ್‌ಒಗಳನ್ನು ನಿಯೋಜನೆ ಮಾಡಿ ಆದೇಶ ನೀಡಲಾಗಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಿದರು.

ಈ ವೇಳೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಕಾಂತರಾಜ್, ಚುನಾವಣಾಧಿಕಾರಿಗಳು, ಎಲ್ಲಾ ವಲಯ ಆಯುಕ್ತರು, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳು, ಲೋಕಸಾಭ ಕ್ಷೇತ್ರಗಳ ಸ್ವೀಪ್ ನೋಡಲ್ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Related